Thursday, January 20, 2022

ಗ್ಯಾಂಗ್​ರೇಪ್​ ಕೇಸ್​ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ

Must read

ಬೀದರ್​: ಮೈಸೂರಿನ ಗ್ಯಾಂಗ್​ರೇಪ್​ ಪ್ರಕರಣ ಮಾಸುವ ಮುನ್ನವೇ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ರಾಜ್ಯದಲ್ಲಿ ಮತ್ತೊಂದು ಘಟನೆ ಸಾಕ್ಷಿಯಾಗಿದೆ.

ಬೀದರ್ ಜಿಲ್ಲೆಯ ಬೇಮಳಖೇಡ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ಸುಮಾರು 21 ರಿಂದ 25 ವಯಸ್ಸಿನ ಯುವತಿ ಇರಬಹುದು ಎಂದು ಅಂದಾಜಿಸಲಾಗಿದೆ.

ಯಾರೋ ದುಷ್ಕರ್ಮಿಗಳು ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಭೇಮಳಖೇಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest article