Tuesday, August 16, 2022

ತೆಂಗಿನಕಾಯಿ ಗೋದಾಮಿಗೆ ಬೆಂಕಿ ಹಚ್ಚಿ ವಿಕೃತಿ ಮೆರೆದ ಕಿಡಿಗೇಡಿಗಳು..!

Must read

ಚಿಕ್ಕಮಗಳೂರು: ತೆಂಗಿನಕಾಯಿ ಗೋದಾಮಿಗೆ ಬೆಂಕಿ ಹೊತ್ತಿಕೊಂಡ ಘಟನೆ ತರೀಕೆರೆ ತಾಲೂಕಿನ ಗುಳ್ಳದಮನೆ ಗ್ರಾಮದಲ್ಲಿ ನಡೆದಿದೆ.

ಗುಳ್ಳದಮನೆ ಗ್ರಾಮದ ನರಸಿಂಹಪ್ಪ ಎಂಬುವವರಿಗೆ ಸೇರಿದ ತೆಂಗಿನಕಾಯಿ ಗೋದಾಮಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಕೊಬ್ಬರಿಗೆ ಹಾಕಿದ್ದಒಣಗಿದ ಕಾಯಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟವಾಗಿದೆ.

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ಆರಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಲಿಂಗದಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Latest article