Tuesday, August 16, 2022

ಧಾರವಾಡದಲ್ಲಿ ಭೀಕರ ರಸ್ತೆ ಅಪಘಾತ: ದಂಪತಿ ಸ್ಥಳದಲ್ಲೇ ಸಾವು, ಮಗು ಪಾರು

Must read

ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದ ಇಂಡಿಯನ್ ಡಾಬಾ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆನಂದ ಸಿದ್ದಗಿರಿ ಮತ್ತು ಸುಷ್ಮಾ ಮೃತ ದುರ್ದೈವಿಗಳು. ದಂಪತಿ ಬೈಕ್​ನಲ್ಲಿ ತಮ್ಮ ಮಗುವಿನೊಂದಿಗೆ ನವಲಗುಂದ ಪಟ್ಟಣದ ಕಡೆಗೆ ತೆರಳುತ್ತಿದ್ದರು. ಈ ವೇಳೆ ಟಿಪ್ಪರ್​ ಲಾರಿ ಡಿಕ್ಕಿ ಹೊಡೆದಿದ್ದು, ದಂಪನಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ.

ಅಪಘಾತದ ಬಳಿಕ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

Latest article