Tuesday, October 26, 2021

ಸಿಲಿಕಾನ್​ ಸಿಟಿಯಲ್ಲಿ ಮತ್ತೆ ಗುಂಡಿನ ಶಬ್ದ: ಕ್ಷುಲ್ಲಕ ಕಾರಣಕ್ಕೆ ಗುಂಡು ಹಾರಿಸಿದ ಕಾರು ಚಾಲಕ

Must read

ಬೆಂಗಳೂರು: ಕಾರು ಚಾಲಕನೊಬ್ಬ ಕ್ಷುಲ್ಲಕ ಕಾರಣಕ್ಕೆ ಬೈಕ್​ ಸವಾರನ ಮೇಲೆ ಗುಂಡು ಹಾರಿಸಿರುವ ಘಟನೆ ನಗರದ ರಾಮಯ್ಯ ಆಸ್ಪತ್ರೆಯ ಹಿಂಬದಿ ಗೇಟ್ ಬಳಿ ನಡೆದಿದೆ.

ಬೈಕ್ ಹಾಗೂ ಆಡಿ‌ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಇಬ್ಬರು ಸವಾರರ ನಡುವೆ ಗಲಾಟೆ ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ಕೊನೆಗೆ ಕಾರು ಚಾಲಕ ತನ್ನ ಬಳಿಯಿದ್ದ ಗನ್​ನಿಂದ ಗುಂಡು ಹಾರಿಸಿದ್ದಾನೆ. ಅದೃಷ್ಟವಶಾತ್​ ಬೈಕ್​ ಸವಾರ ಅಪಾಯದಿಂದ ಪಾರಾಗಿದ್ದಾರೆ.

ಕಾರು ಚಾಲಕ ಘಟನಾ ಸ್ಥಳದಿಂದ ಪರಾರಿಯಾಗಿದ್ದು, ಯಶವಂತಪುರ ಪೊಲೀಸರು ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More articles

Latest article