Saturday, July 2, 2022

ತಂಗಿಯನ್ನು ಚುಡಾಯಿಸಿದಕ್ಕೆ ವ್ಯಕ್ತಿಗೆ ಅಣ್ಣಂದಿರಿಂದ ಚಾಕು ಇರಿತ

Must read

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ನೆತ್ತರು ಹರಿದಿದೆ. ತಂಗಿಯನ್ನು ಚುಡಾಯಿಸಿದ ಕಾರಣಕ್ಕೆ ಅಣ್ಣಂದಿರಿಬ್ಬರು ವ್ಯಕ್ತಿಯೋರ್ವನಿಗೆ ಚಾಕುವಿನಿಂದ ಇರಿದಿದ್ದಾರೆ.

ಹಳೇ ಹುಬ್ಬಳ್ಳಿ ಠಾಣೆ ವ್ಯಾಪ್ತಿಯ ಧಾರವಾಡ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಚಂದ್ರಶೇಖರ್ ಚಾಕು ಇರಿತಕ್ಕೊಳಗಾದ ವ್ಯಕ್ತಿ. ಸದ್ಯ ಗಂಭೀರ ಗಾಯಗೊಂಡಿರುವ ಚಂದ್ರಶೇಖರ್​ನನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಂಗಿಯನ್ನು ಚುಡಾಯಿಸಿದ ಕಾರಣಕ್ಕೆ ಕಿರಣ್ ಹಾಗೂ ಅಭಿ ಎಂಬ ಅಣ್ಣ-ತಮ್ಮ ಚಾಕುವಿನಿಂದ ಇರಿದಿದ್ದಾರೆ ಎಂದು ಗಾಯಾಳು ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

Latest article