ಮಾದಕ ವಸ್ತು ಮಾರಾಟ ಯತ್ನ: ಮೂವರು ಸಿಸಿಬಿ ಬಲೆಗೆ

ಮಾದಕ ವಸ್ತು ಮಾರಾಟ ಯತ್ನ: ಮೂವರು ಸಿಸಿಬಿ ಬಲೆಗೆ

ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ನೈಜಿರಿಯನ್​ ಪ್ರಜೆ ಹಾಗೂ ಓರ್ವ ಕೇರಳ ಮೂಲದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ನಗರದ ಕೊಡಿಗೆಹಳ್ಳಿಯಲ್ಲಿ ಎಂಡಿಎಂಎ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಾದಕ ವಸ್ತುಗಳ ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ಕೊಡಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುಮಾರು ₹30 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನು ಡ್ರಗ್​ ಪೆಡ್ಲರ್​ಗಳು ಐಟಿ ಉದ್ಯೋಗಿಗಳಿಗೆ ಹಾಗೂ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ ಮಾಡುತ್ತಿದ್ದರು ಎನ್ನುವ ಮಾಹಿತಿ ಬಹಿರಂಗವಾಗಿದೆ.

Related Stories

No stories found.
TV 5 Kannada
tv5kannada.com