ತುಮಕೂರು: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ತುಮಕೂರು ನಗರದ ಚರ್ಚ್ ವೃತ್ತದಲ್ಲಿ ಘಟನೆ ನಡೆದಿದೆ. ಬೈಕ್ ಸವಾರ ಲಾರಿಗೆ ಡಿಕ್ಕಿ ಹೊಡೆದು ನಂತರ ಲಾರಿಯ ಚಕ್ರಕ್ಕೆ ಸಿಲುಕಿದ್ದಾನೆ. ಮೃತ ವ್ಯಕ್ತಿ ಸುಮಾರು 35 ವರ್ಷದವನಾಗಿದ್ದು, ಗುರುತು ಪತ್ತೆಯಾಗಿಲ್ಲ. ತುಮಕೂರು ಸಂಚಾರಿ ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.