ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮ ಪಂಚಾಯತ್ ಪಿಡಿಒ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಡಿ.ಕೇಶವಮೂರ್ತಿ ಎಸಿಬಿ ಬಲೆಗೆ ಬಿದ್ದ ಪಿಡಿಒ. ಕೇಶವಮೂರ್ತಿ ಜಮೀನಿಗೆ ಸಂಬಂಧಿತ ಎನ್ಒಸಿ ನೀಡಲು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈಗಾಗಲೇ 5 ಸಾವಿರ ರೂ. ಲಂಚ ಸ್ವೀಕರಿಸಿದ್ದರು.
ಇಂದು 70 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಎಸಿಬಿ ಡಿವೈಎಸ್ ಲೋಕೇಶ್ ನೇತೃತ್ವದ ತಂಡ ದಾಳಿ ನಡೆಸಿ ಪಿಡಿಒನನ್ನು ಬಂಧಿಸಿದೆ.