Friday, January 21, 2022

ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಪ್ರಮುಖ ಆರೋಪಿ ಪ್ರವೀಣ್ ಬಂಧನ

Must read

ಹಾಸನ: ಯುವಕನನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಪೊಲೀಸರು ಪ್ರಮುಖ ಆರೋಪಿ ಪ್ರವೀಣ್​ನನ್ನು ಬಂಧಿಸಿದ್ದಾರೆ.

ಜನವರಿ 11ರಂದು ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿಯುವತಿ ಜೊತೆ ಅಸಭ್ಯ ವರ್ತನೆ ತೋರಿದ ಕಾರಣಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿತ್ತು. ಈ ವೇಳೆ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಯುವಕ ಕೈ ಮುಗಿದು ಬೇಡಿಕೊಂಡರೂ ಬಿಡದ ಯುವಕರ ಗುಂಪು ಆತನ ಮೇಲೆ ಹಲ್ಲೆ ನಡೆಸಿತ್ತು. ಯುವತಿ ಜೊತೆ ಅಸಭ್ಯ ವರ್ತನೆ ತೋರಿದ ಕಾರಣಕ್ಕೆ ಬಿಜಾಪುರ ಮೂಲದ ಮೇಘರಾಜ್ ಎಂಬಾತನನ್ನು ಜನನಿಬಿಡ ಪ್ರದೇಶದಲ್ಲೇ ಬೆತ್ತಲೆಗೊಳಿಸಿ ಎಳೆದಾಡುವ ವಿಡಿಯೋ ಎಲ್ಲೆಡೆ ವೈರಲ್​ ಆಗಿತ್ತು. ಈ ಘಟನೆಯನ್ನು ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದರು.

ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಕರ್ನಾಟಕ ಪ್ರಜಾಶಕ್ತಿ ಸಮಿತಿ ಜಿಲ್ಲಾಧ್ಯಕ್ಷ ಪ್ರವೀಣ್‌ಗೌಡ ಸೇರಿದಂತೆ ಕೆಲವರ ಮೇಲೆ ದೂರು ದಾಖಲಾಗಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿ ಪ್ರವೀಣ್​ನನ್ನು ಪೊಲೀಸರು ಬಂಧಿಸಿದ್ದಾರೆ.

Latest article