Monday, November 29, 2021

ಸಮನ್ಸ್‌ ನೀಡಲು ಬಂದ ಪೊಲೀಸ್‌ ಸಿಬ್ಬಂದಿಯಿಂದ ಬಾಲಕಿ ಮೇಲೆ ಅತ್ಯಾಚಾರ ಆರೋಪ

Must read

ಮಂಗಳೂರು: ಕಡಬ ಠಾಣೆಯ ಪೊಲೀಸ್ ಸಿಬ್ಬಂದಿ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಾಚಾರದ ವಿಚಾರ ವೈರಲ್​ ಬೆನ್ನಲ್ಲೇ ದೂರು ದಾಖಲಾಗಿದೆ.

ಕಡಬ ಪೊಲೀಸ್ ಠಾಣೆಗೆ ಬಾಲಕಿ ತಂದೆ ದೂರು ನೀಡಿದ್ದಾರೆ. ಅಪ್ರಾಪ್ತೆ ಅತ್ಯಾಚಾರ ಆರೋಪದಡಿ ಕಡಬ ಠಾಣೆಯ ಸಿಬ್ಬಂದಿ ಶಿವರಾಜ್ ವಿರುದ್ದ ದೂರು ದಾಖಲಾಗಿದೆ. ತನ್ನ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭವತಿಯಾದ ಬಳಿಕ ಗರ್ಭಪಾತ ಮಾಡಿಸಿದ್ದಾನೆ ಎಂದು ಬಾಲಕಿ ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣವೊಂದರ ಸಂಬಂಧ ಸಮನ್ಸ್ ನೀಡಲು ಆರು ತಿಂಗಳ ಹಿಂದೆ ಮನೆಗೆ ಬಂದಿದ್ದ ವೇಳೆ ಬಾಲಕಿ ಪರಿಚಯವಾಗಿದ್ದಳು. ಪ್ರಕರಣ ಮುಗಿದಿದ್ದರೂ ಶಿವರಾಜ್ ಬೇರೆ ಬೇರೆ ನೆಪವೊಡ್ಡಿ ಮನೆಗೆ ಬರುತ್ತಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸಿ, ಅಪ್ರಾಪ್ತೆ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದಾನೆ. ಗರ್ಭಿಣಿಯಾದ ಬಳಿಕ ಮನೆಯವರಿಗೆ ವಿಷಯ ಗೊತ್ತಾಗಿದೆ.

ಈ ವೇಳೆ ಪೊಲೀಸ್ ಸಿಬ್ಬಂದಿ ಶಿವರಾಜ್​ನನ್ನು ಕೇಳಿದಾಗ ಗರ್ಭಪಾತ ಮಾಡಿಸಲು ದುಡ್ಡು ಕೊಡುತ್ತೇನೆ ಅಂತ ಹೇಳಿ ಬೆದರಿಕೆ ಹಾಕಿದ್ದಾನೆ. ಆರೋಪಿಯನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳದಿದ್ದರೆ, ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ವಿಎಚ್​ಪಿ ಎಚ್ಚರಿಕೆ ನೀಡಿದೆ.

Latest article