Tuesday, October 26, 2021

ಕುದ್ರೋಳಿ ಶ್ರೀಗೋಕರ್ಣನಾಥ ದೇವಸ್ಥಾನಕ್ಕೆ ಸಿಎಂ ಭೇಟಿ

Must read

ಮಂಗಳೂರು: ದಸರಾ ಹಿನ್ನೆಲೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು.

ಉಡುಪಿ ಪ್ರವಾಸ ಮುಗಿಸಿ ನೇರವಾಗಿ ದೇವಸ್ಥಾನಕ್ಕೆ ಆಗಮಿಸಿದ ಬೊಮ್ಮಾಯಿ, ಶ್ರೀ ಗೋಕರ್ಣನಾಥ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.
ಸಿಎಂಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕರಾವಳಿಯ ಶಾಸಕರು ಸಾಥ್ ನೀಡಿದರು.

ಸಿಎಂ ಭೇಟಿ ಹಿನ್ನೆಲೆ, ಕುದ್ರೋಳಿಗೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು. ಮಂಗಳೂರು ದಸರಾ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ನೇತೃತ್ವದಲ್ಲಿ ನಡೆಯುತ್ತಿದ್ದು, ಶ್ರೀಗೋಕರ್ಣನಾಥ ದೇವಸ್ಥಾನದಲ್ಲಿ ನವದುರ್ಗೆಯರ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

More articles

Latest article