Thursday, October 6, 2022

ದ.ಕ ಜಿಲ್ಲಾಡಳಿತದಿಂದ ಪದ್ಮಶ್ರೀ ವಿಜೇತ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ಗೌರವದ ಸ್ವಾಗತ

Must read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ಷರ ಸಂತ ಎಂದೇ ಹೆಸರಾಗಿರುವ ಹರೇಕಳ ಹಾಜಬ್ಬ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿ ತವರಿಗೆ ಮರಳಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ ತಮ್ಮ ಹುಟ್ಟೂರಿಗೆ ಆಗಮಿಸಿರುವ ಹರೇಕಳ ಹಾಜಬ್ಬರನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಆತ್ಮೀಯ ಸ್ವಾಗತಿಸಿಕೊಳ್ಳಲಾಯಿತು. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಹಾಜಬ್ಬರನ್ನು ಶಾಲು ಹೊದಿಸಿ, ಪೇಟಾ ತೊಡಿಸಿ, ಫಲಪುಷ್ಪ ಕೊಟ್ಟು ಗೌರವಿಸಿದ್ದಾರೆ.

ಜಿಲ್ಲಾಧಿಕಾರಿಗಳ ಗೌರವಾರ್ಪಣೆ ಸ್ವೀಕರಿಸಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕಟೀಲ್ ಕಚೇರಿಗೆ ತೆರಳಿದ ಹಾಜಬ್ಬ, ಸಂಸದ ನಳೀನ್​ ಕುಮಾರ್​ ಕಟೀಲ್​ ಕಚೇರಿಯ ಸಿಬ್ಬಂದಿಯನ್ನು ಭೇಟಿಯಾಗಿಯಾಗಿದ್ದಾರೆ. ಬಳಿಕ ದಕ್ಷಿಣ ಕನ್ನಡ ಜಿಲ್ಲಾಡಳಿತ, ಸಂಸದ ನಳಿನ್ ಕುಮಾರ್​ ಕಟೀಲ್​, ಶಾಸಕ ಯು.ಟಿ.ಖಾದರ್, ಮಂಗಳೂರು ಜನರು ಹಾಗೂ ಮಾಧ್ಯಮ ‌ಮಿತ್ರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Latest article