ಮಂಗಳೂರು: ಮೂವರು ಮಕ್ಕಳನ್ನು ತಂದೆಯೇ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಪದ್ಮನೂರು ಬಳಿ ನಡೆದಿದೆ.
ರಶ್ಮಿತಾ (14) ಉದಯ್ (11) ಹಾಗೂ ದಕ್ಷಿತ್ (04) ಮೃತ ದುರ್ದೈವಿಗಳು.
ವಿಜೇಶ್ ಶೆಟ್ಟಿಗಾರ್ ಎನ್ನುವಾತ ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ್ದು, ಬಳಿಕ ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಂಗಳೂರು ಉತ್ತರ ಎಸಿಪಿ ಮಹೇಶ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.