ದಕ್ಷಿಣ ಕನ್ನಡ: ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಸ್ಟೇಬಲ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪುತ್ತೂರು ತಾಲೂಕಿನ ಸವಣೂರು ಗ್ರಾಮದ ನಿವಾಸಿ ಜಗನ್ನಾಥ್.ಪಿ (44) ಹೃದಯಾಘಾತದಿಂದ ಮೃತರಾಗಿರುವ ಹೆಡ್ ಕಾನ್ಸ್ಸ್ಟೇಬಲ್.
ಕೊಣಾಜೆ ಠಾಣೆಯಲ್ಲಿ ಹಲವು ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿದ್ದ ಜಗನ್ನಾಥ್ ಅವರಿಗೆ ಇಂದು ಬೆಳಗ್ಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.