Thursday, January 20, 2022

ಮರದ ರೂಪದಲ್ಲಿ ಬಂದ ಜವರಾಯ: ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವು

Must read

ಮಂಗಳೂರು: ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಗ್ರಾಮದ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಶಬ್ದ ಕೇಳಿಬಂದಿದೆ. ಶಬ್ದ ಬಂದ ಹಿನ್ನೆಲೆಯಲ್ಲಿ ಚಾಲಕ ಕಾರಿನಿಂದ ಇಳಿದು ಬಾನೆಟ್ ತೆಗೆದು ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಹೆದ್ದಾರಿ ಬದಿಯಲ್ಲಿದ್ದ ಮರವೊಂದು ಕಾರಿನ ಮೇಲೆಯೇ ಬಿದ್ದಿದೆ.

ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಮಹಿಳೆ ಹಾಗೂ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಇವರೆಲ್ಲರೂ ಬೆಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Latest article