Tuesday, October 26, 2021

ಲೈಂಗಿಕ ಕಿರುಕುಳ ಆರೋಪ: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅರೆಸ್ಟ್

Must read

ಮಂಗಳೂರು: ಲೈಂಗಿಕ ಕಿರುಕುಳ ಆರೋಪದಡಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಕ್(45) ಬಂಧಿತ ಆರೋಪಿ.

ಆರೋಪಿ ಫಾರೂಕ್ ಪಾಂಡೇಶ್ವರದ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಕೆಲಸಕ್ಕಿದ್ದ ಯುವತಿಗೆ ಯುವತಿಗೆ ವಾಟ್ಸಪ್​ನಲ್ಲಿ ನಗ್ನ ಚಿತ್ರ ಕಳುಹಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ಕಚೇರಿಯಲ್ಲೇ ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಕೆಲಸ ಬಿಟ್ಟು ತೆರಳಿದ ಯುವತಿಯಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಮಹಿಳಾ ಠಾಣೆ ಪೊಲೀಸರು ಆರೋಪಿ ಫಾರೂಕ್​ನನ್ನು ಬಂಧಿಸಿದ್ದಾರೆ.

More articles

Latest article