Tuesday, August 16, 2022

ಇಂತಹ ದುಷ್ಕೃತ್ಯ ನಡೆದಾಗ ಕಾಂಗ್ರೆಸ್ ಯಾರ ಪರವಾಗಿರುತ್ತದೆ-ನಳಿನ್ ಕುಮಾರ್ ‌ಕಟೀಲ್

Must read

ಮಂಗಳೂರು: ರಾಜಸ್ತಾನದಲ್ಲಿ ನಡೆದ ಹಿಂದೂ ಟೈಲರ್ ಹತ್ಯೆ ನಾಚಿಗೆಗೇಡು. ಇದೊಂದು ವ್ಯವಸ್ಥಿತ ಸಂಚು, ದೇಶದಲ್ಲಿ ಮತ್ತೆ ಭಯೋತ್ಪಾದಕ ಚಟುವಟಿಕೆ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ‌ನಳಿನ್ ಕುಮಾರ್ ‌ಕಟೀಲ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಇದೇ ಮಾದರಿಯಲ್ಲಿ ಶಿವಮೊಗ್ಗದಲ್ಲೂ ಹರ್ಷನ ಹತ್ಯೆ ‌ನಡೆದಿತ್ತು. ಹರ್ಷನ ಕತ್ತು ಸಿಗಿದು ಹತ್ಯೆ ಮಾಡಿ ಅದರ ವಿಡಿಯೋ ತಂಗಿಗೆ ಕಳುಹಿಸಲಾಗಿತ್ತು. ರಾಜಸ್ಥಾನ ಘಟನೆ ಮತ್ತು ಗಲಭೆಯ ಹಿಂದೆ ವಿದೇಶಿ ಕೈವಾಡವಿದೆ. ಅಲ್ಲಿನ ಸರ್ಕಾರದ ಪುಷ್ಟೀಕರಣ ನೀತಿಯ ಕಾರಣದಿಂದ ಈ ಘಟನೆ ಆಗಿದೆ ಎಂದರು. ಕಾಂಗ್ರೆಸ್ ಈಗ ಮೌನವಾಗಿರುವ ಹಿನ್ನೆಲೆ ಏನು..? ಇಂತಹ ದುಷ್ಕೃತ್ಯ ನಡೆದಾಗ ಕಾಂಗ್ರೆಸ್ ಯಾರ ಪರವಾಗಿರುತ್ತದೆ ಎನ್ನುವುದು ಮುಖ್ಯ ಎಂದರು.

ಇಂಥಹ ಘಟನೆಯನ್ನು ಖಂಡಿಸುತ್ತೇನೆ, ಆರೋಪಿಗಳ ವಿರುದ್ಧ ಕಠಿಣ ಕ್ರಮ ಆಗಬೇಕು. ಉತ್ತರ ಪ್ರದೇಶದ ಯೋಗಿ ಮಾದರಿ ನಿರ್ಧಾರಗಳ ಅವಶ್ಯಕತೆ ಇದೆ. ತಕ್ಷಣ ಕಠಿಣ ಕ್ರಮ ಅಗಬೇಕು, ಕೇಂದ್ರ ಸರ್ಕಾರ ಎನ್​ಐಎ ಕಳುಹಿಸಿದೆ. ಇದೊಂದು ಮಾನವೀಯತೆಗೆ ಸವಾಲಾಗಿರುವ ಪ್ರಕರಣ. ನಿರಂತರ ಗಲಭೆ ಸೃಷ್ಟಿಸಲು ಹತ್ಯೆ ಮಾಡಿ ಸಮಾಜ ಒಡೆಯಲಾಗುತ್ತಿದೆ. ಜಿಹಾದಿ ಹೆಸರಿನಲ್ಲಿ ಇದನ್ನ ಮಾಡಲಾಗುತ್ತಿದ್ದು, ವಿಶ್ವಾಸ ಕಡಿಮೆ ಮಾಡಲಾಗುತ್ತಿದೆ. ನರೇಂದ್ರ ಮೋದಿ ಸರ್ಕಾರ ಇದನ್ನ ಸಹಿಸಲ್ಲ, ತಡೆ ಹಾಕುತ್ತದೆ. ಈ ರೀತಿಯ ಘಟನೆಗಳನ್ನು ಅಲ್ಲಲ್ಲೇ ನಿಯಂತ್ರಿಸುವ ಕೆಲಸ ಆಗಬೇಕು. ಕ್ರೂರಿ ಮಾನಸಿಕತೆಗಳಿಗೆ ಭಯದ ವಾತಾವರಣ ಸೃಷ್ಟಿಸಬೇಕು ಎಂದು ಹೇಳಿದ್ದಾರೆ.

Latest article