ಧಾರವಾಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತದ ಬಣವೆಗಳು ಸುಟ್ಟು ಭಸ್ಮವಾಗಿರುವ ಘಟನೆ ಧಾರವಾಡ ತಾಲೂಕಿನ ಲಕಮಾಪೂರ ಗ್ರಾಮದಲ್ಲಿ ನಡೆದಿದೆ.
ಅಶೋಕ ಹುಡೆದ್ ಎಂಬುವವರಿಗೆ ಸೇರಿದ ಬಣವೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ನೋಡ ನೋಡುತ್ತಿದ್ದಂತೆ ಎರಡೂ ಬಣವೆಗಳು ಹೊತ್ತಿ ಉರಿದಿವೆ.
ವಿಷಯ ತಿಳಿದು ಸ್ಥಳಕ್ಕಾಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಧಾರವಾಡ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ನಡೆದ ಘಟನೆ ನಡೆದಿದ್ದು, ಬೆಂಕಿ ಅವಘಡದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ.