ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಹಾಗೂ ಗಲಭೆ ಪ್ರಕರಣ ಸಂಬಂಧ 11 ಎಫ್ಐಆರ್ಗಳಿಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಪ್ರಕರಣ ಸಂಬಂಧ 158 ಜನ ಆರೋಪಿಗಳ ಮೇಲೆ 12 ಎಫ್ಐಆರ್ ದಾಖಲಾಗಿದೆ. ಈ ಪೈಕಿ 11 ಎಫ್ಐಆರ್ಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಏಪ್ರಿಲ್ 16ರಂದು ಹಳೇ ಹುಬ್ಬಳ್ಳಿ ಠಾಣೆ ಎದುರು ನಡೆದಿದ್ದ ಗಲಭೆ ಪ್ರಕರಣದ ಆರೋಪಿಗಳು ರಾಜ್ಯದ ಬೇರೆ ಬೇರೆ ಜೈಲುಗಳಲ್ಲಿದ್ದು, ಆರೋಪಿಗಳ ಮೇಲಿನ 12 ಪ್ರಕರಣದಲ್ಲಿ 11 ಎಫ್ಐಆರ್ ವಿರುದ್ಧ ಆರೋಪಿ ಪರ ವಕೀಲರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಸದ್ಯ11 ಎಫ್ಐಆರ್ಗೆ ಮಧ್ಯಂತರ ತಡೆ ನೀಡಿದೆ. ಅಲ್ಲದೇ ಜೂನ್ 7ಕ್ಕೆ ವಿಚಾರಣೆ ಮುಂದದೂಡಿದೆ.