Sunday, October 2, 2022

ಲಾರಿಗಳು ಮುಖಾಮುಖಿ ಡಿಕ್ಕಿ: ಚಾಲಕರ ಸ್ಥಿತಿ ಚಿಂತಾಜನಕ

Must read

ಹುಬ್ಬಳ್ಳಿ: ಲಾರಿಗಳು ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಹುಬ್ಬಳ್ಳಿ ಹೊರವಲಯ ತಾರಿಹಾಳ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಪೂನ ಹಾಗೂ ಬೆಂಗಳೂರು ರಸ್ತೆಯಲ್ಲಿ ವೇಗವಾಗಿ ಬಂದ ಲಾರಿಗಳು ಚಾಲಕನ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಒಂದು ಲಾರಿ ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದೆ.

ಘಟನೆಯಲ್ಲಿ ಚಾಲಕರು ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest article