Thursday, January 27, 2022

ನಾಳೆಯಿಂದ ನೀರಸಾಗರ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ..!

Must read

ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಕೆಲವು ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಿದೆ.

ಪ್ರವಾಸಿ ತಾಣಗಳಿಗೆ ಧಾರವಾಡ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು, ನಾಳೆಯಿಂದ, ಒಟ್ಟು ಮೂರು‌ ದಿನಗಳವರೆಗೆ ನೀರಸಾಗರ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಿದೆ.

ಮಕರ ಸಂಕ್ರಾಂತಿ ಹಿನ್ನಲೆಯಲ್ಲಿ ಜಲಾಶಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆಯಿದ್ದು, ಕೊರೊನಾ ಸೋಂಕು ಮತ್ತಷ್ಟು ಹರಡುವ ಸಾಧ್ಯತೆಯಿದೆ. ಈ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

Latest article