ಹುಬ್ಬಳ್ಳಿ: ವ್ಯಕ್ತಿಯೋರ್ವರಿಂದ ನಗರದು ಕದ್ದು ಪರಾರಿಯಾಗಿದ್ದ ಆರೋಪಿಗಳನ್ನು ಹುಬ್ಬಳ್ಳಿಯ ಉಪ ನಗರ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಕಳೆದ ಎರಡು ದಿನಗಳ ಹಿಂದೆ ವ್ಯಕ್ತಿಯೋರ್ವರಿಂದ ಸುಮಾರು 10,000 ನಗದು ಕಿತ್ತಕೊಂಡು ಪರಾರಿಯಾಗಿದ್ದರು.ಈ ಬಗ್ಗೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಕೇವಲ 48ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳಿಂದ 9,500ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಉಪಯೋಗಿಸಿದ ಆಟೋವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳು ವಿದ್ಯಾನಗರ ಮತ್ತು ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೂಡ ಕಳ್ಳತನ ಮಾಡಿರುವ ಬಗ್ಗೆ ತನಿಖೆಯಲ್ಲಿ ಬಯಲಾಗಿದೆ.