Wednesday, May 18, 2022

ಕ್ಯಾಂಟರ್ ಪಲ್ಟಿ: ಸ್ಥಳದಲ್ಲೇ ಇಬ್ಬರ ದುರ್ಮರಣ

Must read

ಧಾರವಾಡ: ಕ್ಯಾಂಟರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದ ಬಳಿ ನಡೆದಿದೆ.

ನಿದ್ರೆ ಮಂಪರಿನಲ್ಲಿ ವಾಹನ ಚಲಾಯಿಸುತ್ತಿದ್ದರಿಂದ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಬೆಳಗಿನ ಜಾವ ಈ ಘಟನೆ ನಡೆದಿದೆ.

ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ನೀಡಿ, ಪರಿಶಿಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಆ್ಯಂಬುಲೆನ್ಸ್​ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಯಾಂಟರ್‌ನಲ್ಲಿದ್ದ ನಾಲ್ವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

Latest article