ಜ್ಞಾನಭಾರತಿ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರಾಟಗಾರರ ಬಂಧನ

ಜ್ಞಾನಭಾರತಿ ಪೊಲೀಸರ ಕಾರ್ಯಾಚರಣೆ: ಗಾಂಜಾ ಮಾರಾಟಗಾರರ ಬಂಧನ

ಬೆಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ರಾಜಾ ಬಾಬು, ಮಾರಪ್ಪ ,‌ಮುಸ್ತಫಾ ಬಂಧಿತ ಆರೋಪಿಗಳು.

ಆರೋಪಿಗಳು ಕಾರಿನಲ್ಲಿಟ್ಟುಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದರು. ಈ ವೇಳೆ ಕಾರ್ಯಾಚರಣೆ ನಡೆಸಿದ ಜ್ಞಾನಭಾರತಿ ಪೊಲೀಸರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರದ ಮೌಲ್ಯದ 2.5 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಮತ್ತೆ ಮೂವರನ್ನ ಬಂಧಿಸಲಾಗಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Stories

No stories found.
TV 5 Kannada
tv5kannada.com