ಖಾಸಗಿ ಹೋಟೆಲ್​ನಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಖಾಸಗಿ ಹೋಟೆಲ್​ನಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ
TV5

ಬೆಂಗಳೂರು: ನಗರದ ಖಾಸಗಿ ಹೋಟೆಲ್​ನಲ್ಲಿ ನಿನ್ನೆ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ನಗರದ ಎಂಜಿ ರಸ್ತೆಯಲ್ಲಿರುವ ಖಾಸಗಿ ಹೋಟೆಲ್​ನಲ್ಲಿ ನಿನ್ನೆ ರಾತ್ರಿ‌10:30ರ ಸುಮಾರಿಗೆ ದಟ್ಟ ಹೊಗೆ ಆವರಿಸಿದ್ದು, ಉಸಿರಾಡಲಾಗದೇ ಹೋಟೆಲ್​​ ಸಿಬ್ಬಂದಿ ಎರಡನೇ ಮಹಡಿಯಿಂದ ಜಿಗಿದಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಅಪಾಯದಲ್ಲಿ ಸಿಲುಕಿದ್ದ ಐವರು ಸಿಬ್ಬಂದಿಯನ್ನು ರಕ್ಷಿಸಿದ್ದಾರೆ.

ನೋಡನೋಡುತ್ತಿದ್ದಂತೆ ಹೋಟೆಲ್​ನ ರಿಸಪ್ಷನ್​ ಸ್ಥಳ ಹೊತ್ತಿ ಉರಿದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿಯಾಗಿದೆ. ಇನ್ನು ಹೋಟೆಲ್​ ಹೊರಗೆ ಪಾರ್ಕಿಂಗ್​ನಲ್ಲಿದ್ದ ಆಟೋ ಹಾಗೂ ಜೀಪ್ ಕೂಡ ಸುಟ್ಟು ಕರಕಲಾಗಿದೆ.

ಘಟನೆ ಸಂಬಂಧ ಹಲಸೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Stories

No stories found.
TV 5 Kannada
tv5kannada.com