ಮಂಗಳೂರು ಏರ್​ಪೋರ್ಟ್​ ರಸ್ತೆ ಕುಸಿತ: ಸಂಚಾರ ಬಂದ್​

ಭಾರೀ ಮಳೆಗೆ ದಕ್ಷಿಣ ಕನ್ನಡ ತತ್ತರ
ಮಂಗಳೂರು ಏರ್​ಪೋರ್ಟ್​ ರಸ್ತೆ ಕುಸಿತ: ಸಂಚಾರ ಬಂದ್​

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಕಳೆದರೆಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ಏರ್​ಪೋರ್ಟ್​ಗೆ ತೆರಳುವ ರಸ್ತೆ ಕುಸಿತ ಉಂಟಾಗಿದೆ.

ಮಂಗಳೂರು ಹೊರವಲಯದ ಬಜ್ಪೆಯ ಮರವೂರು ಬಳಿ ಹೊಸ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಒಂದೇ ಭಾಗದಲ್ಲಿ ಮಳೆ ನೀರಿನ ಹರಿವು ಹೆಚ್ಚಾದ ಹೆಚ್ಚಾಗಿದ್ದ ಕಾರಣ ಸೇತುವೆ ಒಂದು ಭಾಗದ ಪಿಲ್ಲರ್ ಕುಸಿದು ರಸ್ತೆಗೆ ಹಾನಿಯಾಗಿದೆ.

ಮಂಗಳೂರಿನಿಂದ ವಿಮಾನ ನಿಲ್ದಾಣ ಭಾಗಕ್ಕೆ ಸಂಚಾರ ಸಂಪೂರ್ಣ ಸ್ಥಗಿತಗೊಂದಿದ್ದು, ಉಡುಪಿಯಿಂದ ಬರುವವರು ಮೂಲ್ಕಿಯಲ್ಲಿ ತಿರುವ ಪಡೆದು ಕಿನ್ನಿಗೋಳಿ-ಕಟೀಲು ರಸ್ತೆಯಾಗಿ ಏರ್​ಪೋರ್ಟ್​ಗೆ ತೆರಳುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಮಂಗಳೂರು ಕಮಿಷನರ್​ ಶಶಿಕುಮಾರ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Stories

No stories found.
TV 5 Kannada
tv5kannada.com