ಹಿಂದಿ ಭಾಷೆ ಹೇರಿಕೆ ಖಂಡಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಹಿಂದಿ ಭಾಷೆ ಹೇರಿಕೆ ಖಂಡಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಹುಬ್ಬಳ್ಳಿ: ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಕರ್ನಾಟಕ ಸಂಗ್ರಾಮ ಸೇನೆ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ಸರ್ಕಲ್​​ನಿಂದ ಸೆಂಟ್ರಲ್ ಬ್ಯಾಂಕ್​ನವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದ ಕಾರ್ಯಕರ್ತರು ಕನ್ನಡಿಗರಿಗೆ ಇಂದು ಕರಾಳ ದಿನ ಎಂದು ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾವಿರಾರು ಇತಿಹಾಸ ಹೊಂದಿದ ಕನ್ನಡ ಭಾಷೆಗೆ ಅವಮಾನ ಮಾಡುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ತಮ್ಮ ನಿರ್ಧಾರವನ್ನು ಹಿಂದಕ್ಕೆ ತೆಗೆದುಕೊಳ್ಳಬೇಕು. ಇಲ್ಲವಾದರೆ ರಾಜ್ಯಾದ್ಯಂತ ಹೋರಾಟ ಮಾಡಲಾಗುತ್ತದೆ ಎಂದು ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

Related Stories

No stories found.
TV 5 Kannada
tv5kannada.com