ಕೈ-ಕೈ ಮಿಲಾಯಿಸಿದ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು: ಸ್ಥಳದಲ್ಲಿ ಉದ್ವಿಗ್ನ ವಾತಾವರಣ

ಕಾಂಗ್ರೆಸ್​ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ
ಕೈ-ಕೈ ಮಿಲಾಯಿಸಿದ  ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು: ಸ್ಥಳದಲ್ಲಿ ಉದ್ವಿಗ್ನ  ವಾತಾವರಣ
TV5

ಮೈಸೂರು: ಜಿಲ್ಲೆಯ ಉಚ್ಚಗಣಿ ಗ್ರಾಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಜಗಳ ಅತಿರೇಕಕ್ಕೆರಿದ್ದು, ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಮಹದೇವಮ್ಮ ದೇಗುಲ ನಿರ್ವಹಣೆ ಸಂಬಂಧ ಗಲಾಟೆ ಆರಂಭವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತ ಉದಯರವಿ ಮೇಲೆ ಕಬ್ಬಿಣದ ರಾಡ್​ನಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನಾ ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿದ್ದು, ಪರಿಸ್ಥಿತಿ ತಿಳಿಗೊಳಿಸಲು ಹರಸಾಹಸ ಪಟ್ಟಿದ್ದಾರೆ.

ಘಟನೆಯಲ್ಲಿ ಉದಯರವಿ ಗಂಭೀರ ಗಾಯಗೊಂಡಿದ್ದಾರೆ. ಇದರಿಂದ ರೊಚ್ಚಿಗೆದ್ದ ಬಿಜೆಪಿ ಕಾರ್ಯಕರ್ತರು ಹಾಗೂ ಉದಯರವಿ ಸಹೋದರರು ಮಾರಕಾಸ್ತ್ರಗಳನ್ನು ಹಿಡಿದು ಓಡಾಡುತ್ತಿದ್ದು, ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

Related Stories

No stories found.
TV 5 Kannada
tv5kannada.com