ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು..!

ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು..!

ಮೈಸೂರು: ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಜಿಲ್ಲಾ ಕಾಂಗ್ರೆಸ್​ ಸಮಿತಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ.

ಕೆಡಿಪಿ ಸಭೆಯಲ್ಲಿ ಸಂಸದ ಪ್ರತಾಪ್​ ಸಿಂಹ ನೀಡಿರುವ ಹೇಳಿಗಳ ವಿರುದ್ಧ ಮೈಸೂರು ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ.

ಕೆಡಿಪಿ ಸಭೆಯಲ್ಲಿ ಸಂಸದರು ಜಿಲ್ಲಾಧಿಕಾರಿಗಳಿಗೆ ಈ ರೀತಿ ಬೆದರಿಕೆ ಹಾಕಿರುವುದು ಅಕ್ಷಮ್ಯ ಅಪರಾಧ. ಕೋಮು ಗಲಭೆ ಸೃಷ್ಟಿಸಲು ರಾತ್ರೋರಾತ್ರಿ ಹಿಂದೂ ದೇವಾಲಯ ಹೊಡೆದು ಹಾಕಲಾಗಿದೆ. ಇದರ ರಾಜಕೀಯ ಲಾಭ ಪಡೆಯುವ ಹುನ್ನಾರ ಪ್ರತಾಪ್ ಸಿಂಹರದ್ದು, ಅರಸು ರಸ್ತೆಯ ದರ್ಗಾ, ಇರ್ವೀನ್ ರಸ್ತೆಯಲ್ಲಿರುವ ಮಸೀದಿ ಈ ಎರಡು ವಿಚಾರ ಈಗಾಗಲೇ ಕೋರ್ಟ್‌ನಲ್ಲಿದೆ. ಇದನ್ನು ಕೆಡವಿ ಎಂದು ಕೆಡಿಪಿ ಸಭೆಯಲ್ಲಿ ಸಂಸದರು ಆಗ್ರಹಿಸಿರುವುದು ತಪ್ಪು ಎಂದು ಕಾಂಗ್ರೆಸ್ ನಿಯೋಗ ಆಕ್ರೋಶ ಹೊರಹಾಕಿದೆ.

Related Stories

No stories found.
TV 5 Kannada
tv5kannada.com