’ಮದ್ಯದಂಗಡಿ ತೆರವುಗೊಳಿಸುವ ವರೆಗೂ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸಲ್ಲ’

ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮಸ್ಥರ ಹೊಸ ಅಭಿಯಾನ
’ಮದ್ಯದಂಗಡಿ ತೆರವುಗೊಳಿಸುವ ವರೆಗೂ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸಲ್ಲ’
TV5

ಶಿವಮೊಗ್ಗ: ಸಾಗರ ತಾಲೂಕಿನ ಕಸಬಾ ಹೋಬಳಿಯ ಬೆಳ್ಳಿಕೊಪ್ಪ ಗ್ರಾಮದಲ್ಲಿ ತೆರೆದಿರುವ ಮದ್ಯದಂಗಡಿಯನ್ನು ಮುಚ್ಚುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದು, ಅಂಗಡಿ ಬಂದ್​ ಮಾಡುವ ವರೆಗೂ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸಲ್ಲ ಎಂದು ಅಭಿಯಾನ ಆರಂಭಿಸಿದ್ದಾರೆ.

ಬೆಳ್ಳಿಕೊಪ್ಪ ಗ್ರಾಮದಲ್ಲಿ ಎಂಎಸ್ಐಎಲ್ ಮಳಿಗೆ ತೆರೆಯಲಾಗಿದ್ದು, ಕಳೆದ ಡಿಸೆಂಬರ್​ನಲ್ಲಿ ಮದ್ಯದಂಗಡಿ ವಿರೋಧಿಸಿ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡಿದ್ದರು. ಈ ವೇಳೆ ಅಧಿಕಾರಿಗಳು ಮದ್ಯದಂಗಡಿ ಬಂದ್ ಮಾಡಿ, ಮತದಾನ ಮಾಡುವಂತೆ ಮನವೊಲಿಸಿದ್ದರು. ಇದೀಗ ಮತ್ತೆ ಮದ್ಯದಂಗಡಿ ಓಪನ್​ ಆಗಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಗರ ತಾಲೂಕಿನ ಕಸಬಾ ಹೋಬಳಿಯ ಬೆಳ್ಳಿಕೊಪ್ಪ ಗ್ರಾಮದಲ್ಲಿ ಮಕ್ಕಳು ಶಾಲೆಗೆ ಹೋಗುವ ಸ್ಥಳದಲ್ಲಿ ಎಂಎಸ್ಐಎಲ್​ನಿಂದ ಮದ್ಯದ ಅಂಗಡಿಯನ್ನು ತೆರೆದಿದ್ದು, ಈ ಮದ್ಯದ ಅಂಗಡಿ ತೆರವುಗೊಳಿಸುವ ವರೆಗೂ ನಮ್ಮ ಊರಿನ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಬ್ಯಾನರ್​​ ಅಳವಡಿಸಿ ಬೆಳ್ಳಿಕೊಪ್ಪ ಗ್ರಾಮಸ್ಥರು ಮತ್ತೊಂದು ಹೋರಾಟ ಆರಂಭಿಸಿದ್ದಾರೆ.

Related Stories

No stories found.
TV 5 Kannada
tv5kannada.com