ಬೆಂಕಿ ಅವಘಡ: ಹೊತ್ತಿ ಉರಿದ ಲಾಡ್ಜ್​

ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ
ಬೆಂಕಿ ಅವಘಡ: ಹೊತ್ತಿ ಉರಿದ ಲಾಡ್ಜ್​

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಬಳಿಯ ಮಂದಾರ​ ಲಾಡ್ಜ್​​ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಕಾರ್ಗಲ್ ಮೂಲದ ಜಾಕೀರ್ ಅವರ ಒಡೆತನದ ಮಂದಾರ ಹೋಟೆಲ್ ಹಾಗೂ ಲಾಡ್ಜ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಕಟ್ಟದ ಮೂರನೇ ಮಹಡಿ ಹೊತ್ತಿ ಉರಿದಿದೆ.

ಬೆಂಕಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಡ್ ಹಾಗೂ ಪೀಠೋಪಕರಣಗಳು ಸುಟ್ಟು ಭಸ್ಮವಾಗಿದೆ.

ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳದಲ್ಲಿ ಪೋಲೀಸರು ಹಾಗು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Related Stories

No stories found.
TV 5 Kannada
tv5kannada.com