ಕೆಲವು ದಲ್ಲಾಳಿಗಳು ರಾಜಕೀಯ ದುರುದ್ದೇಶದಿಂದ ರೈತರ ಮುಖವಾಡ ಧರಿಸಿ ಪ್ರತಿಭಟನೆಗೆ ಕುಮ್ಮಕ್ಕು

ವಿರೋಧ ಪಕ್ಷಗಳು ಎಲ್ಲಾ ರೀತಿಯಲ್ಲಿಯೂ ಸೋತಿವೆ. ಹೀಗಾಗಿಯೇ ರೈತರ ಮೂಲಕ ಪ್ರತಿಭಟನೆ ಮಾಡಿಸುತ್ತಿದ್ದಾರೆ.
ಕೆಲವು ದಲ್ಲಾಳಿಗಳು ರಾಜಕೀಯ ದುರುದ್ದೇಶದಿಂದ ರೈತರ ಮುಖವಾಡ ಧರಿಸಿ ಪ್ರತಿಭಟನೆಗೆ ಕುಮ್ಮಕ್ಕು

ಶಿವಮೊಗ್ಗ:ಈಗಾಗಲೇ ಕಳೆದ ಒಂದು ತಿಂಗಳಿಂದ ರೈತ ಸಂಘಟನೆಗಳು ಹೋರಾಟ ಮಾಡುತ್ತಿವೆ. ಇವತ್ತು ಕೂಡ ಕೇಂದ್ರದ ವಿರುದ್ಧ ಭಾರತ್ ಬಂದ್ ಅನ್ನು ರೈತರು ಮಾಡುತ್ತಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತಪರವಾದ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದು ಶಿಮಮೊಗ್ಗ ಬಿಜೆಪಿ ಸಂಸದ ಬಿ.ವೈ ರಾಘವೇಂದ್ರ ಅವರು ಕೇಂದ್ರ ಕಾಯ್ದೆ ಬಗ್ಗೆ ಸಮರ್ಥನೆ ಮಾಡಿಕೊಂಡಿದ್ದಾರೆ.

ಇವತ್ತು ರೈತರು ಭಾರತ್​ ಬಂದ್​ಗೆ ಕರೆ ನೀಡಿರುವ ಹಿನ್ನೆಲೆ ಮಾಧ್ಯಮ ಜೊತೆ ಮಾತನಾಡಿದ ಅವರು, ರೈತರ ಆದಾಯ ದ್ವಿಗುಣಗೊಳಿಸುವ ಸಲುವಾಗಿ ಕೆಲ ಕಾಯ್ದೆಗಳಿಗೆ ತಿದ್ದುಪಡಿ ಮಾಡಿದೆ. ಲೋಕಸಭೆಯಲ್ಲಿ ಸಾಕಷ್ಟು ಚರ್ಚೆ ಮಾಡಿಯೇ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ರೈತಪರ ಚಿಂತನೆ ಮಾಡುವ ಹಲವರು ಈಗಾಗಲೇ ಕಾಯ್ದೆಯನ್ನು ಸ್ವಾಗತಿಸಿದ್ದಾರೆ. ಇದರ ಪರಿಣಾಮ ಈಗಾಗಲೇ ಮಾರುಕಟ್ಟೆ ಹಾಗೂ ರೈತರ ಜೀವನದಲ್ಲಿ ಕಾಣುತ್ತಿದ್ದೇವೆ ಎಂದರು.

ಇನ್ನು ಎಪಿಎಂಸಿ ಕಾಯ್ದೆಯ ಮೂಲಕ ಎಪಿಎಂಸಿ ಒಳಗೆ ಹಾಗೂ ಹೊರಗೆ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಆದರೆ, ಕೆಲವು ದಲ್ಲಾಳಿಗಳು ರಾಜಕೀಯ ದುರುದ್ದೇಶದಿಂದ ರೈತರ ಮುಖವಾಡ ಧರಿಸಿ ಪ್ರತಿಭಟನೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪ ಮಾಡಿದರು.

ಸದ್ಯ ರೈತರಿಂದ ಹೋರಾಟ ಮಾಡಿಸಿ, ಕೇಂದ್ರ ಸರ್ಕಾರದ ವಿರುದ್ಧ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ 2022ರೊಳಗೆ ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶ ಹೊಂದಿದೆ. ಯೂರಿಯಾ ಗೊಬ್ಬರ ನಿರಂತರ ಪೂರೈಕೆ, ಕಿಸಾನ್ ಕಾರ್ಡ್, ಸಾಯಿಲ್ ಹೆಲ್ತ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ ಜೊತೆಗೆ ಫಸಲ್ ಭೀಮಾ ಯೋಜನೆ, ಕಿಸಾನ್ ಸಮ್ಮಾನ್ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಆಹಾರ ಧಾನ್ಯಗಳ ಉತ್ಪಾದನಾ ಪ್ರಮಾಣ 2014ರಲ್ಲಿ 250 ಮಿಲಿಯನ್ ಟನ್ ಇತ್ತು. ಅದು 2020ರ ವೇಳೆಗೆ 291 ಮಿಲಿಯನ್ ಟನ್​ಗೆ ಏರಿಕೆಯಾಗಿದೆ. ಇದೆಲ್ಲದರ ನಡುವೆಯೂ ಕೇಂದ್ರ ಸರ್ಕಾರದ ವಿರುದ್ದ ರೈತರನ್ನು ಎತ್ತಿಕಟ್ಟಿ ತಪ್ಪು ದಾರಿಗೆ ಎಳೆಯಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ಕಾರ್ಯವೈಖರಿಯನ್ನು ವಿವರಿಸಿದರು.

ಮಸೂದೆಗಳ ತಿದ್ದುಪಡಿ ಆದ ನಂತರದಲ್ಲೇ ಕನಿಷ್ಟ ಬೆಂಬಲ ಬೆಲೆಯಡಿ ಕೇಂದ್ರ ಸರ್ಕಾರವೇ ಖರೀದಿ ಮಾಡಿದೆ. ಆದರೂ ಸಹ ನೂತನ ಕಾಯ್ದೆಯಿಂದ ಬೆಳೆಗಳಿಗೆ ಕನಿಷ್ಟ ಬೆಲೆ ರದ್ದಾಗಲಿದೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳು ಎಲ್ಲಾ ರೀತಿಯಲ್ಲಿಯೂ ಸೋತಿವೆ. ಹೀಗಾಗಿಯೇ ರೈತರ ಮೂಲಕ ಪ್ರತಿಭಟನೆ ಮಾಡಿಸುತ್ತಿದ್ದಾರೆ. ಕೇಂದ್ರ ಸರ್ಕಾರ ರೈತರ ಪರ ಇದ್ದು, ರೈತರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Related Stories

No stories found.
TV 5 Kannada
tv5kannada.com