Wednesday, May 18, 2022

ಆಯುಷ್ ಚಿಕಿತ್ಸೆಗೆ ನಾವು ಹೆಚ್ಚು ಆದ್ಯತೆ ಕೊಡುತ್ತೇವೆ – ಸಚಿವ ಬಿ. ಶ್ರೀರಾಮುಲು

Must read

ಬೆಂಗಳೂರು: ಮಾಗಡಿಯಲ್ಲಿ ಕೆಎಸ್​ಆರ್​​ಟಿಸಿ ಡ್ರೈವರ್​ಗೆ ಕೊರೊನಾ ಸೋಂಕು ದೃಢ ಹಿನ್ನೆಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಡ್ರೈವರ್​ಗೆ ಕೊರೊನಾ ಬಂದಿದ್ದರಿಂದ ಅವರ ಜೊತೆಗೆ ಪ್ರಯಾಣಿಸಿದವರನ್ನು ಟೆಸ್ಟ್ ಮಾಡಲು ಸೂಚನೆ ನೀಡಿದ್ದೇನೆ. ಕೆಎಸ್​ಆರ್​​ಟಿಸಿ ಸಿಬ್ಬಂದಿ ಮತ್ತು ಅವರ ಕುಟುಂಬ ವರ್ಗದವರಿಗೂ ಟೆಸ್ಟ್ ಮಾಡುತ್ತೇವೆ ಎಂದರು.

ಇನ್ನು ರೆಡ್ ​ಝೋನ್ ಹಾಗೂ ಕಂಟೈನ್​ಮೆಂಟ್​ ಝೋನ್​ನಿಂದ ಬಂದು ಕೆಲಸ ಮಾಡುತ್ತಿರುವವರಿಗೂ, ಜೊತೆಗೆ ಅವರ ಸಂಪರ್ಕದಲ್ಲಿ ಇರುವವರಿಗೂ ಟೆಸ್ಟ್ ಮಾಡಿಸುತ್ತೇವೆ. ರಾಜ್ಯಾದ್ಯಂತ ಕೊರೊನಾ ನಿಯಂತ್ರಣ ಮಾಡಲು ಅಗತ್ಯ ಕ್ರಮಕೈಗೊಂಡಿದ್ದೇವೆ. ಟೆಸ್ಟ್ ಮಾಡಿಸಲು ಇಲಾಖೆ ಎಲ್ಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ಕೆಎಸ್​ಆರ್​ಟಿಸಿ ಸಿಬ್ಬಂದಿ ಆತಂಕಪಡುವ ಅಗತ್ಯ ಇಲ್ಲ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಆಯುಷ್ ವೈದ್ಯರ ಪ್ರತಿಭಟನೆ ವಿಚಾರದ ಬಗ್ಗೆ ಮಾತನಾಡಿದ ಅವರು, ಆಯುಷ್ ವೈದ್ಯರು ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಈಗ ಸಭೆ ನಡೆಸುತ್ತೇನೆ. ಆಯುಷ್ ವೈದ್ಯರು ನನ್ನ ಮುಂದೆ ಹಲವು ಬೇಡಿಕೆಗಳನ್ನ ಇಟ್ಟಿದ್ದಾರೆ. ಸಾಕಷ್ಟು ವರ್ಷಗಳಿಂದ ಈ ಸಮಸ್ಯೆಗಳು ಹಾಗೇ ಇವೆ. ಎಂಬಿಬಿಎಸ್ ವೈದ್ಯರ ಸಮನಾಗಿ ಆಯುಷ್ ವೈದ್ಯರು ವೇತನ ಕೇಳಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿ ಬಳಿಕ ಒಂದು ಸಮಿತಿ ಮಡುತ್ತೇವೆ. ಆ ಸಮಿತಿ ವರದಿ ಬಂದ ಬಳಿಕ ಸೂಕ್ತ ಕ್ರಮಕೈಗೊಳ್ಳಲಾಗುವುದು. ಅದುವಲ್ಲದೇ, ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ಕೊಡಿ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿಯವರು ಹೇಳಿದಂತೆ ಆಯುಷ್ ಚಿಕಿತ್ಸೆಗೆ ನಾವು ಹೆಚ್ಚು ಆದ್ಯತೆ ಕೊಡುತ್ತೇವೆ ಎಂದು ಸ್ಪಷ್ಟನೆ ನೀಡಿದರು.

Latest article