Tuesday, May 17, 2022

ಕುಮಾರಸ್ವಾಮಿ ಮೊದಲು ಕ್ಷಮೆ ಕೇಳಲಿ – ವಿಜಯೇಂದ್ರ ಕಿಡಿ

Must read

ಬೆಂಗಳೂರು: ಸ್ವಾರ್ಥ, ಅಧಿಕಾರಕ್ಕಾಗಿ ಎಷ್ಟು ಕೀಳುಮಟ್ಟಕ್ಕೆ ಇಳಿಯಬಹುದು ಎನ್ನುವುದರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಯವರಿಗೆ ಸರಿಸಾಟಿಯಿಲ್ಲ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಇಡೀ ದೇಶವೇ ಗೌರವಿಸುವ ಶ್ರೀಗಳ ಫೋನ್ ಕದ್ದಾಲಿಸಿದ್ದು ಮಾತ್ರವಲ್ಲದೆ, ಸ್ಮಗ್ಲರ್ ಗಳ ಪಟ್ಟಿಯಲ್ಲಿ ಸೇರಿಸಿ, ಅಕ್ಷಮ್ಯ ಅಪರಾಧ ಎಸಗಿದ್ದಾರೆ. ಅವರಲ್ಲಿ ಸ್ವಲ್ಪವಾದರೂ ನೈತಿಕತೆ ಉಳಿದಿದ್ದರೆ ಮೊದಲು ಗುರುಗಳ ಕ್ಷಮೆ ಕೇಳಲಿ ಎಂದು ಕುಮಾರಸ್ವಾಮಿ ವಿರುದ್ಧ ಬಿ. ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

Latest article