Sunday, October 2, 2022

ಕೋಟೆನಾಡಿನಲ್ಲಿ ಇಂದು ಕೊರೊನಾ ಬಗ್ಗೆ ಬಂದ ವರದಿಯ ವಿವರಣೆ..

Must read

ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಕೋವಿಡ್-19 ವೈರಸ್‍ನ ಯಾವುದೇ ಪಾಸಿಟೀವ್ ಪ್ರಕರಣ ವರದಿಯಾಗಿಲ್ಲ. ಉಳಿದಂತೆ 78 ಜನರ ಪ್ರಯೋಗಾಲಯದ ವರದಿ ಬರುವುದು ಬಾಕಿ ಇದೆ. ಜಿಲ್ಲೆಯಲ್ಲಿ ಈವರೆಗೆ ವರದಿಯಾದ ಒಟ್ಟು 07 ಪಾಸಿಟೀವ್ ಪ್ರಕರಣಗಳ ಪೈಕಿ ಒಬ್ಬರು ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು, 06 ಜನರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಂದು ಒಟ್ಟು 37 ಜನರ ಗಂಟಲುದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಇದುವರೆಗೂ 1,284 ಶಂಕಿತರ ಗಂಟಲು ದ್ರವ ಹಾಗೂ ರಕ್ತ ಮಾದರಿಯನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿಲಾಗಿದೆ, ಈ ಪೈಕಿ ಈವರೆಗೆ 1,157 ಜನರ ವರದಿ ನೆಗೆಟೀವ್ ಎಂದು ವರದಿಯಾಗಿದೆ. ಈವರೆಗೆ ಜಿಲ್ಲೆಯಲ್ಲಿ 310 ಜನರು 28 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ.

ಸದ್ಯ ಹೊರ ಜಿಲ್ಲೆ, ಹೊರ ರಾಜ್ಯದಿಂದ ಬಂದವರು ಹಾಗೂ ಶಂಕಿತರ ಸಂಪರ್ಕ ಹಿನ್ನೆಲೆ ಹೊಂದಿರುವ 256 ಜನರನ್ನು ಹೋಂ ಕ್ವಾರಂಟೈನ್ ನಿಗಾನಲ್ಲಿ ಇರಿಸಲಾಗಿದ್ದು, 59 ಜನರನ್ನು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇಡಲಾಗಿದೆ. 828 ಜನರಿಗೆ ಇಂದು ಸ್ಕ್ರೀನಿಂಗ್ ಮಾಡಲಾಗಿದ್ದು, ಇದುವರೆಗೂ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಚಿತ್ರದುರ್ಗ ಜಿಲ್ಲೆಗೆ ಬಂದಿರುವ 2,42,011 ಜನರಿಗೆ ಸ್ಕ್ರೀನಿಂಗ್ ಮಾಡಲಾಗಿದೆ. ಫಿವರ್ ಕ್ಲಿನಿಕ್‍ಗಳಲ್ಲಿ 273 ಜನರಿಗೆ ಜ್ವರ ತಪಾಸಣೆ ಮಾಡಿದ್ದು, ಇದುವರೆಗೂ ಜಿಲ್ಲೆಯಲ್ಲಿ ಫಿವರ್ ಕ್ಲಿನಿಕ್‍ನಲ್ಲಿ ಒಟ್ಟು 12,948 ಜನರಿಗೆ ಜ್ವರ ತಪಾಸಣೆ ಮಾಡಲಾಗಿದೆ.

ಅಲ್ಲದೆ ಜಿಲ್ಲೆಯಲ್ಲಿ 71 ಜನರಿಗೆ ಮಾನಸಿಕ ಆರೋಗ್ಯ ಕುರಿತು ಆಪ್ತ ಸಮಾಲೋಚನೆ ಮಾಡಲಾಗಿದ್ದು, ಈವರೆಗೆ 511 ಜನರಿಗೆ ಮಾನಸಿಕ ಆರೋಗ್ಯ ತಜ್ಞರಿಂದ ಮೂರ್ನಾಲ್ಕು ದಿನಗಳಿಗೊಮ್ಮೆ ಆಪ್ತ ಸಮಾಲೋಚನೆ ಮಾಡಿಸಲಾಗಿದೆ. ಇದುವರೆಗೂ ಉಸಿರಾಟದ ತೊಂದರೆ, ತೀವ್ರ ಜ್ವರದಂತತಹ ಆರೋಗ್ಯ ಸಮಸ್ಯೆ ಹೊಂದಿರುವ 1,007 ರೋಗಿಗಳಿಗೆ ತಪಾಸಣೆ ಮಾಡಲಾಗಿದೆ.

Latest article