Thursday, May 19, 2022

ಚಾಮರಾಜನಗರ ಜಿಲ್ಲೆಯ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ- ಮೈಸೂರು ದಸರಾ 2019

Must read

ಮೈಸೂರು: ನಾಡಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಈ ಬಾರಿ ಚಾಮರಾಜನಗರದ ಸಮೃದ್ಧಿ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣ ಎಂಬ ಹೆಸರಿನ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ ಲಭಿಸಿದೆ.

ವಿಶ್ವವಿಖ್ಯಾತ ದಸರಾ ಮಹೋತ್ಸವದ ಅಂಗವಾಗಿ ನಡೆದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿದ ಚಾಮರಾಜನಗರ ಜಿಲ್ಲೆಯ “ಸಂವೃದ್ಧಿ ಸಂಪತ್ತಿನ ನಡುವೆ ಹುಲಿಯ ಸಂತೃಪ್ತ ತಾಣ” ವಿಷಯ ಕುರಿತ ಸ್ತಬ್ಧ ಚಿತ್ರಕ್ಕೆ ಪ್ರಥಮ ಸ್ಥಾನ ಲಭಿಸಿದೆ.

ಅಂತೆಯೇ ಉತ್ತರ ಕನ್ನಡ ಜಿಲ್ಲೆಯ ಕದಂಬ/ಬನವಾಸಿ ವಿಷಯ ಆಧಾರಿತ ಸ್ತಬ್ಧಚಿತ್ರಕ್ಕೆ ದ್ವೀತಿಯ ಹಾಗೂ ತುಮಕೂರು ಜಿಲ್ಲೆಯ ನಡೆದಾಡುವ ದೇವರು ವಿಷಯ ಕುರಿತ ಸ್ತಬ್ಧಚಿತ್ರಕ್ಕೆ ತೃತೀಯ ಸ್ಥಾನ ಲಭಿಸಿದೆ.

ಇನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸರ್ಕಾರದ ಸೌಲಭ್ಯಗಳ ಮಾಹಿತಿ ವಿಷಯ ಆಧಾರಿತ ಸ್ತಬ್ಧಚಿತ್ರ, ಶಿವಮೊಗ್ಗ ಜಿಲ್ಲೆಯ ಫಿಟ್ ಇಂಡಿಯಾ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಶಿಶಿಲ ಬೆಟ್ಟ ವಿಷಯ ಆಧಾರಿತ ಸ್ತಬ್ಧಚಿತ್ರಗಳು ಸಮಾಧಾನಕರ ಬಹುಮಾನವನ್ನು ಹಂಚಿಕೊಂಡಿದೆ. ನಿನ್ನೆ ನಡೆದ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಯಲ್ಲಿ 30 ಜಿಲ್ಲೆಗಳ ಸ್ಥಬ್ಧಚಿತ್ರ ಸೇರಿದಂತೆ 38 ಸ್ತಬ್ಧ ಚಿತ್ರಗಳು ಭಾಗಿಯಾಗಿದ್ದವು.

Latest article