ಬೆಂಗಳೂರು: ಮನೆ ಬಾಗಿಲಿಗೆ ಬಂದು ಕೋವಿಡ್ 19 ಬಗ್ಗೆ ಜಾಗೃತಿ ಮೂಡಿಸುವ ವೈದ್ಯರು, ನರ್ಸ್ಗಳು, ಆಶಾ ಕಾರ್ಯಕರ್ತರು ಹಾಗೂ ಈ ಸಂಕಷ್ಟದ ಸಮಯದಲ್ಲಿ ಹಗಲಿರುಳು ದುಡಿಯುತ್ತಿರುವವರು ದೇವರ ಸಮಾನ. ಅವರನ್ನು ಗೌರವದಿಂದ ನೋಡಿ, ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ. ಎಚ್ಚರವಿರಲಿ(!) ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಟ್ವಿಟ್ ಮಾಡುವ ವಾರ್ನಿಂಗ್ ನೀಡಿದ್ದಾರೆ.
ಮನೆ ಬಾಗಿಲಿಗೆ ಬಂದು #Covid19 ಬಗ್ಗೆ ಜಾಗೃತಿ ಮೂಡಿಸುವ ವೈದ್ಯರು, ನರ್ಸ್ ಗಳು, ಆಶಾ ಕಾರ್ಯಕರ್ತರು ಹಾಗೂ ಈ ಸಂಕಷ್ಟದ ಸಮಯದಲ್ಲಿ ಹಗಲಿರುಳು ದುಡಿಯುತ್ತಿರುವವರು ದೇವರ ಸಮಾನ. ಅವರನ್ನು ಗೌರವದಿಂದ ನೋಡಿ. ಅವರ ಮೇಲೆ ಹಲ್ಲೆ ನಡೆದರೆ ನೋಡಿಕೊಂಡು ಸುಮ್ಮನೆ ಕೂರಲಾಗುವುದಿಲ್ಲ. ಎಚ್ಚರವಿರಲಿ!! pic.twitter.com/1pAJOEZCrE
— B Sriramulu (@sriramulubjp) April 2, 2020
ಇಲ್ಲಿ ಜಾತಿ, ಮತ, ಧರ್ಮ ಮುಖ್ಯವಲ್ಲ. ನಿಮ್ಮ ವೈಯಕ್ತಿಕ ಹಿತಾಸಕ್ತಿ ಮುಖ್ಯವಲ್ಲ. ಕೋಟ್ಯಂತರ ಕನ್ನಡಿಗರ, ಭಾರತೀಯರ ಆರೋಗ್ಯ ಮುಖ್ಯ. ಬೆಂಗಳೂರಿನ ಸಾಧಿಕ್ ಪಾಳ್ಯದಲ್ಲಿ ಕೆಲವು ಕಿಡಿಗೇಡಿಗಳು ಸೇರಿ ನರ್ಸ್ ಮೇಲೆ ಹಲ್ಲೆ ಮಾಡಿದ್ದು ಅತ್ಯಂತ ಹೇಯ ಕೃತ್ಯ. ಯಾರೇ ಆಗಲಿ, ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನುರೀತ್ಯ ಕ್ರಮ ಕೈಗೊಳ್ಳಲಿದ್ದೇವೆ ಎಂದು ಸಚಿವ ಶ್ರೀರಾಮುಲು ಅವರು ಕಿಡಿಗೇಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಇಲ್ಲಿ ಜಾತಿ, ಮತ, ಧರ್ಮ ಮುಖ್ಯವಲ್ಲ. ನಿಮ್ಮ ವೈಯಕ್ತಿಕ ಹಿತಾಸಕ್ತಿ ಮುಖ್ಯವಲ್ಲ. ಕೋಟ್ಯಂತರ ಕನ್ನಡಿಗರ, ಭಾರತೀಯರ ಆರೋಗ್ಯ ಮುಖ್ಯ. ಬೆಂಗಳೂರಿನ ಸಾಧಿಕ್ ಪಾಳ್ಯದಲ್ಲಿ ಕೆಲವು ಕಿಡಿಗೇಡಿಗಳು ಸೇರಿ ನರ್ಸ್ ಮೇಲೆ ಹಲ್ಲೆ ಮಾಡಿದ್ದು ಅತ್ಯಂತ ಹೇಯ ಕೃತ್ಯ. ಯಾರೇ ಆಗಲಿ, ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನುರೀತ್ಯ ಕ್ರಮ ಕೈಗೊಳ್ಳಲಿದ್ದೇವೆ. pic.twitter.com/FerrOVkA5P
— B Sriramulu (@sriramulubjp) April 2, 2020