Wednesday, May 18, 2022

'ನಾಳೆ ಕೊನೆಯ ದಿನ ಉಚಿತವಾಗಿ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಸಿ ಕೊಡುತ್ತೇವೆ'

Must read

ಬೆಂಗಳೂರು: ನಾಲ್ಕು ದಿನಗಳಿಂದ 3,500 ಬಸ್​ಗಳಲ್ಲಿ ಸುಮಾರು ಒಂದು ಲಕ್ಷ ಜನರನ್ನು ಕಳಿಸಿದ್ದಾರೆ, ಈ ವೇಳೆ ಭಯಪಡದೇ ಸಾರಿಗೆ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ್ ಸವದಿ ಅವರು ಬುಧವಾರ ಹೇಳಿದರು.

ನಗರದಲ್ಲಿಂದು ಕೊರೊನಾ ವಾರಿಯರ್ಸ್​ಗೆ ಗೌರವ ನಮನ ಸಲ್ಲಿಸಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ತಮ್ಮ ಜೀವದ ಭಯವನ್ನು ತೊರೆದು ವೈದ್ಯರು, ಆಶಾ ಕಾರ್ಯಕರ್ತೆಯರು, ಸಾರಿಗೆ ಸಿಬ್ಬಂದಿಗಳು ಕೆಲಸ ಮಾಡಿದ್ದಾರೆ. ಅಂತಹ ಸಿಬ್ಬಂದಿಗಳಿಗೆ ಹಾಗೂ ಆ ತಂಡಕ್ಕೆ ಅಭಿನಂದನೆ ಸಲ್ಲಿಸುವ ಕೆಲಸವನ್ನು ಸರ್ಕಾರದ ವತಿಯಿಂದ ಮಾಡಿದ್ದೇವೆ ಎಂದರು.

ಇನ್ನು ನಾಳೆ ಕೊನೆಯ ದಿನ ಉಚಿತವಾಗಿ ಕಾರ್ಮಿಕರನ್ನು ಅವರ ಊರುಗಳಿಗೆ ಕಳಿಸುವ ಕೆಲಸ ಮಾಡುತ್ತಿದ್ದೇವೆ. ಸಂಘ ಸಂಸ್ಥೆಗಳು ಬ್ರೆಡ್ ಹಾಗೂ ಆಹಾರಗಳನ್ನು ಕೂಡ ಸಾಕಷ್ಟು ಜನರಿಗೆ ಕೊಟ್ಟಿದ್ದಾರೆ ಮತ್ತು ಮಾಧ್ಯಮ ಮಿತ್ರರು ಕೂಡ ನಮ್ಮ ತಪ್ಪುಗಳನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ ಇವರೆಲ್ಲರಿಗೂ ನಾನು ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಅವರು ತಿಳಿಸಿದರು.

ಸಾರಿಗೆ ಸಿಬ್ಬಂದಿಗೆ ಸಂಬಳವಾಗದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಸಾರಿಗೆ ಇಲಾಖೆಯ ಸಿಬ್ಬಂದಿಗಳು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ, ನಾನು ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದೇನೆ. ನೇರವಾಗಿ ಸರ್ಕಾರದಿಂದ 326 ಕೋಟಿ ರೂ.ಗಳನ್ನು ಪಡೆದುಕೊಂಡು ಸಂಬಳ ಕೊಡುವ ಕೆಲಸ ಮಾಡುತ್ತೇವೆ. ಮೂರ್ನಾಲ್ಕು ದಿನಗಳಲ್ಲಿ ಅವರ ಅಕೌಂಟಿಗೆ ಹಣ ತಲುಪಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ನುಡಿದರು.

Latest article