Wednesday, May 18, 2022

ಬಿತ್ತನೆ ಬೀಜಕ್ಕೆ ಸರ್ಕಾರವೇ ಬೆಲೆ ನಿಗದಿಪಡಿಲಿದೆ – ಸಚಿವ ಬಿ.ಸಿ ಪಾಟೀಲ್

Must read

ಉತ್ತರ ಕನ್ನಡ: ಮುಂದಿನ ವರ್ಷದಿಂದ ರೈತರಿಗೆ ಬೇಕಾದ ಬಿತ್ತನೆ ಬೀಜಕ್ಕೆ ಸರ್ಕಾರವೇ ಬೆಲೆ ನಿಗದಿಪಡಿಸಲಿದ್ದು ಏಕರೂಪ ಬೆಲೆ ಜಾರಿಯಾಗಲಿದೆ ಎಂದು ಕೃಷಿ ಸಚಿವ ಬಿ. ಸಿ ಪಾಟೀಲ್ ಅವರು ಸೋಮವಾರ ಹೇಳಿದರು.

ಕೋವಿಡ್ 19ನಿಂದ ಲಾಕ್​​ಡೌನ್​ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಶಿರಸಿಗೆ ಆಗಮಿಸಿದ ಅವರು ಅಂಬೇಡ್ಕರ್ ಭವನದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಇದೇ ವೇಳೆ ಮಾತನಾಡಿದ ಅವರು, ಫಸಲ್ ಭೀಮಾ ಯೋಜನೆಯಿಂದಾದ ಸಮಸ್ಯೆಗೆ ಹೊಸ ತಂತ್ರಾಂಶ ಅಳವಡಿಕೆ ಜಾರಿಯಲ್ಲಿದ್ದು, ಕಂತು ಕಟ್ಟಿದ ರೈತರಿಗೆ ಯಾವುದೇ ರೀತಿಯ ಅನ್ಯಾಯ ಆಗದಂತೆ ವಿಮೆ ಬರಲು ಸೂಕ್ತ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಇನ್ನು ಯಾವುದೇ ಕಂಪೆನಿಯ ಬಿತ್ತನೆ ಬೀಜ ಐಸಿಸಿಎಯಲ್ಲಿ ರಿಜಿಸ್ಟರ್ ಆದ ಬಿತ್ತನೆ ಬೀಜ ರಸಗೊಬ್ಬರವನ್ನು ಮಾತ್ರವೇ ಮಾರಾಟ ಮಾಡಬೇಕು. ಅಕ್ರಮ ಕಳಪೆ ಗುಣಮಟ್ಟ ರಹಿತ ಬೀಜ ಪತ್ತೆ ಮಾಡಿ ರೈತರಿಗೆ ಉಪಯೋಗಕಾರಿ ಕೆಲಸ ಮಾಡುವುದು ನಮ್ಮ ಕರ್ತವ್ಯ ಎಂದರು.

ಸದ್ಯ ಕೊರೊನಾ ಜಗತ್ತಿಗೆ ಬಂದಂತಹ ಕಂಟಕ. ಲಾಕ್​​ಡೌನ್​​​ ಸಂದರ್ಭದಲ್ಲಿ ಯಾವುದೇ ಕೃಷಿ ಚಟುವಟಿಕೆ ಸ್ಥಗಿತಗೊಂಡಿಲ್ಲ. ರೈತರಿಗೆ ಬೀಜ ಗೊಬ್ಬರದ ಬಿತ್ತನೆಗೆ ಬೀಜ ರಸಗೊಬ್ಬರ ನಮ್ಮಲ್ಲಿ ದಾಸ್ತಾನು ಇದ್ದು ಯಾವುದೇ ಕೊರತೆಯಿಲ್ಲ. ಅವಶ್ಯಕತೆಗೆ ತಕ್ಕಂತೆ ಗೊಬ್ಬರ ಬಿತ್ತನೆ ಬೀಜ ಪೂರೈಸಲಾಗುವುದು ಎಂದು ಅವರು ಹೇಳಿದ್ದಾರೆ.

Latest article