ಹುಬ್ಬಳ್ಳಿ: ಸಿದ್ಧರಾಮಯ್ಯ ಅವರು ಇತಿಹಾಸದ ಬಗ್ಗೆ ಸರಿಯಾಗಿ ತಿಳಿದುಕೊಳ್ಳಲಿ ಎಂದು ದೊಡ್ಡ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಇತಿಹಾಸವನ್ನು ತಿಳಿದುಕೊಳ್ಳದೇ ಸಿದ್ಧರಾಮಯ್ಯ ಅವರು ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ ಇದು ಅವರ ವ್ಯಕ್ತಿತ್ವವನ್ನು ಹಾಗೂ ಕೀಳುಮಟ್ಟದ ಸಂಸ್ಕೃತಿಯನ್ನು ತೋರಿಸುತ್ತದೆ ಎಂದರು.
ಇನ್ನೂ ಉಮೇಶ ಕತ್ತಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಯಾರೋ ಒಬ್ಬರ ವೈಯಕ್ತಿಕ ವಿಚಾರದ ಹೇಳಿಕೆ ಬಗ್ಗೆ ನಾನು ಮಾತನಾಡುವುದಿಲ್ಲ. ಅದರ ಬಗ್ಗೆ ಅವರಿಗೆ ಕೇಳಿ ನಾನೇನೂ ಹೇಳುವುದಿಲ್ಲ.ಇನ್ನೂ ಯತ್ನಾಳ್ ನೋಟೀಸ್ ಗೆ ಉತ್ತರಿಸದ ಬಗ್ಗೆಯೂ ನಾನೇನು ಉತ್ತರಿಸುವುದಿಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದರು.