ಹುಬ್ಬಳ್ಳಿ: ಉಪಚುನಾವಣೆಗಳ ಬಗ್ಗೆ ಸಭೆ ನಡೆಸುತ್ತಿದ್ದೇವೆ. ಬಿಜೆಪಿಯ ಪ್ರಮುಖರೊಂದಿಗೆ ಬೆಳಗ್ಗೆಯಿಂದ ಸಂಜೆಯವರೆಗೆ ಸಮಾಲೋಚನೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಹೇಳಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಈ ಮಾಧ್ಯಮದ ಜೊತೆ ಮಾತನಾಡಿದ ಅವರು, ನೆರೆ ಪರಿಹಾರಕ್ಕೆ ರಾಜ್ಯದಲ್ಲಿ ಹಣಕಾಸಿನ ಕೊರತೆಯಿಲ್ಲ, ಮೊದಲಿನಂತೆ ಸೂಕ್ತ ಪರಿಹಾರ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ನುಡಿದರು.
ಅದುವಲ್ಲದೇ ವಿಪಕ್ಷ ನಾಯಕರಾದ ಮೇಲೆ ಸಿದ್ದರಾಮಯ್ಯ ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ, ವೀರ ವೀರ ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ಅವರಿಗೆ ಎಬಿಸಿಡಿ ಗೊತ್ತಿಲ್ಲ, ಅಂಡಮಾನ್ಗೆ ಹೋಗಿ ಅವರು ಏನು ಶಿಕ್ಷೆ ಅನುಭವಿಸಿದ್ದಾರೆಂದು ನೋಡಿ ತಿಳಿದುಕೊಳ್ಳಲಿ, ಅವರ ತ್ಯಾಗದ ಅರಿವು ಬರುತ್ತೆ ಎಂದು ಅವರು ತಿಳಿಸಿದ್ದಾರೆ.
ಅಷ್ಟೇಅಲ್ಲದೇ ಸ್ಪೀಕರ್ ಬಗ್ಗೆ ಹಗುರವಾಗಿ ಏಕವಚನದಲ್ಲಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಈ ನಾಡಿನ ಜನರ ಕ್ಷಮೆ ಕೇಳಬೇಕು. ವಿಧಾನಸಭೆಯಲ್ಲಿ ಹಕ್ಕುಚ್ಯುತಿ ಮಂಡನೆ ಮಾಡುತ್ತೇವೆ. ದೇಶದ ಇತಿಹಾಸದಲ್ಲಿ ಸ್ಪೀಕರ್ ಬಗ್ಗೆ ಈ ರೀತಿ ಹಗುರವಾಗಿ ಯಾರೂ ಮಾತನಾಡಿರಲಿಲ್ಲ. ಸಿದ್ದರಾಮಯ್ಯ ಅವರಿಗೆ ಜನರು ತಕ್ಕ ಪಾಠವನ್ನು ಕಲಿಸುತ್ತಾರೆ. ಇನ್ನು ಮುಂದೆ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಅವರು ನುಡಿದರು.