ಬೆಂಗಳೂರು: ಇಂದಿರಾ ಕ್ಯಾಂಟಿನ್ ಬಡವರ ಆಶಾ ಕಿರಣ. ಹಸಿದ ಹೊಟ್ಟೆಗೆ ಅನ್ನ ನೀಡುವ ಕೇಂದ್ರ. ಇಂಥಹ ಪುಣ್ಯದ ಕೆಲಸದಲ್ಲಿ ತಾರತಮ್ಯ ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಕಿವಿಹಿಂಡಿದ್ದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೆಯಾಗಿರುವ ಮಹತ್ವದ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಕೂಡ ಒಂದು. ಅದ್ರೀಗ ಇಂದಿರಾ ಕ್ಯಾಂಟೀನ್ ಮೇಲೆ ಸರ್ಕಾರದ ಕರಿ ನೆರಳು ಬಿದ್ದಿದೆ. ಯಾವುದೇ ಕಾರಣಕ್ಕೂ ಯೋಜನೆಯನ್ನು ನಿಲ್ಲಿಸಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದರು.
ಬೆಂಗಳೂರಿನಲ್ಲಿ 98 ಇಂದಿರಾ ಕ್ಯಾಂಟೀನ್ ಇದ್ದರೆ, ರಾಜ್ಯದ ಇತರೆಡೆ 200 ಕ್ಯಾಂಟೀನ್ಗಳು ಕಾರ್ಯನಿರ್ವಹಿಸುತ್ತಿವೆ. ಹೀಗಾಗಿ ಹೊಸ ತಾಲೂಕುಗಳಲ್ಲೂ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕು. ಇನ್ನೂ ಹೆಚ್ಚಿನ ರೀತಿಯಲ್ಲಿ ಒಳ್ಳೆಯ ಆಹಾರ ಕೊಡುವ ವ್ಯವಸ್ಥೆ ಮಾಡಿ ಎಂದು ಸರ್ಕಾರಕ್ಕೆ ಸಿದ್ದರಾಮಯ್ಯ ಎಚ್ಚರಿಸಿದರು
ಬಿಜೆಪಿ ಆಡಳಿತದಲ್ಲಿರುವ ಬಿಬಿಎಂಪಿಯಲ್ಲೂ ಅನುದಾನವಿಲ್ಲ ಎನ್ನುವ ಮಾತು ಕೇಳಿ ಬರುತ್ತಿದೆ. ಅಲ್ಲದೇ ಸರ್ಕಾರದ ಬಜೆಟ್ನಲ್ಲೂ ಅನುದಾನವಿಲ್ಲ ಎನ್ನುತ್ತಾರೆ. ಹೀಗಾಗಿ ಜನರಲ್ಲಿ ಗೊಂದಲವಿದೆ ಎಂದು ಸಿದ್ದರಾಮಯ್ಯ ಸದನದಲ್ಲಿ ಗುಡುಗಿದರು.