Wednesday, May 18, 2022

'ಸಿದ್ದರಾಮಯ್ಯ ಮತ್ತು ಕುಟುಂಬದವರು ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ, ಆಸ್ತಿಯೂ ಹೋಗಿಲ್ಲ'

Must read

ವಿಜಯಪುರ/ಬಿಜಾಪುರ: ವೀರ ಸಾವರ್ಕರ್ ಕುರಿತು ಮಾಜಿ ಸಿಎಂ ಸಿದ್ಧರಾಮಯ್ಯ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಜೆಡಿಎಸ್​ ಅನರ್ಹ ಶಾಸಕ ಹೆಚ್​. ವಿಶ್ವನಾಥ್​ ಅವರು, ಸಾವರ್ಕರ್​ಗೆ ಭಾರತ ರತ್ನ ನೀಡುವ ಬಗ್ಗೆ ವಿವಾದ ಎದ್ದಿರುವುದು ವಿಷಾದಕರ ಎಂದು ಅವರು ಸೋಮವಾರ ಹೇಳಿದರು.

ನಗರದಲ್ಲಿ ಮಾಧ್ಯಮದ ಜೊತೆ ಮಾತಿಗಿಳಿದ ಅವರು, ಸಾವರ್ಕರ್​ ಮತ್ತು ಅವರ ಕುಟುಂಬದವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನ ಮಾಡಿದವರ ಪಟ್ಟಿಯಲ್ಲಿದ್ದಾರೆ. ನಾನು, ನನ್ನ ಕುಟುಂಬ, ಸಿದ್ಧರಾಮಯ್ಯ ಮತ್ತು ಅವರ ಕುಟುಂಬದವರಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ, ನಮ್ಮ ಆಸ್ತಿಯೂ ಹೋಗಿಲ್ಲ, ವೀರ ಸಾವರ್ಕರ್ ಅವರಂಥ ನಾಯಕರು ಹೋರಾಟ ನಡೆಸಿದ್ದರಿಂದ ಅದರ ಫಲವನ್ನು ನಾವು ಉಣ್ಣುತ್ತಿದ್ದೇವೆ ಎಂದು ಅವರು ತಿಳಿಸಿದರು.

ಇನ್ನು ನಾಳೆ ಸುಪ್ರೀಂ ಕೋರ್ಟಿನಲ್ಲಿ ನಮ್ಮ ಪರ ತೀರ್ಪು ಬರುವ ನಂಬಿಕೆಯಿದೆ, ವಿಶ್ವಾಸವಿದೆ. ಏಕೆಂದರೆ ಅಂದಿನ ಸ್ಪೀಕರ್ ರಮೇಶ್ ಕುಮಾರ್​ ಅವರು ಕಾನೂನು ಬಾಹಿರ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟಿಗೆ ಹೋಗಿದ್ದೇವೆ. ಕೋರ್ಟ್​ ನಮ್ಮ ವಾದವನ್ನು ಎತ್ತಿ ಹಿಡಿಯುವ ವಿಶ್ವಾಸವಿದೆ ಎಂದು ಅವರು ತಿಳಿಸಿದರು.

ಅಂತೆಯೇ ಸಿದ್ದರಾಮಯ್ಯ ತಮ್ಮ ಬಗ್ಗೆ ಕುರಿತು ಆಡಿರುವ ಮಾತಿಗೆ ಹೆಚ್​. ವಿಶ್ವನಾಥ್​ ಅವರು ಪ್ರತಿಕ್ರಿಯಿಸಿದ್ದು, ಸಿದ್ಧರಾಮಯ್ಯ ಮಾಜಿ ಮುಖ್ಯಮಂತ್ರಿಗಳು, ದೊಡ್ಡವರು, ಸತ್ಯವಂತರು, ರಾಷ್ಟ್ರ ನಾಯಕರು, ಸ್ವಾತಂತ್ರ್ಯ ಪ್ರೇಮಿಗಳು ಅವರ ಬಗ್ಗೆ ಮೈಸೂರಿನಲ್ಲಿ ಉತ್ತರ ಕೊಡುತ್ತೇನೆ ಎಂದರು.

ಅದುವಲ್ಲದೇ ಸೋಮದೇವರ ಹಟ್ಟಿಯಲ್ಲಿ ವಿಶೇಷ ಪೂಜೆ ವಿಚಾರವಾಗಿ ಮಾತನಾಡಿದ ಅವರು, ಪ್ರಗತಿಪರರಾದ ತಾವು ದೇವರಿಗೆ ಕೈ ಮುಗಿಯಬಾರದೇ(?) ದೇವರಿಗೆ ಕೈ ಮುಗಿಯುವುದು, ಹೋಮ-ಹವನ ಮಾಡುವುದು ಬೇಡ ಅಂತ ಎಲ್ಲಿದೆ. ಶ್ರದ್ಧಾ ಭಕ್ತಿಯಿಂದ ದೇವರಿಗೆ ನಡೆದುಕೊಳ್ಳುವುದು ನಮ್ಮಲ್ಲಿ ಬಂದಿರುವ ಪದ್ಧತಿ. ತಿಕೋಟಾದಲ್ಲಿ ಸ್ನೇಹಿತರೊಬ್ಬರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದೇನೆ. ತಿಕೋಟಾದಿಂದ ಬೆಳಗಾವಿ ಮೂಲಕ ದೆಹಲಿಗೆ ತೆರಳುತ್ತೇನೆ ಎಂದು ವಿಜಯಪುರದಲ್ಲಿ ಜೆಡಿಎಸ್ ಅನರ್ಹ ಶಾಸಕ ಹೆಚ್​. ವಿಶ್ವನಾಥ್​ ಅವರು ನುಡಿದರು.

Latest article