ಗದಗ: ಗದಗ-ಬೆಟಗೇರಿ ನಗರಸಭೆ ಚುನಾವಣೆಯ ಚಟುವಟಿಕೆ ಗರಿಗೆದರಿದ್ದು, ಕಾಂಗ್ರೆಸ್ ಮೆರೆವಣಿಗೆ ವೇಳೆ ಮಹಿಳೆ ಮೇಲೆ ಹಣ ಎಸೆದು ವಿಕೃತಿ ಮೆರೆದಿರುವ ಘಟನೆ ನಡೆದಿದೆ.
ಗದಗ ವಾರ್ಡ ನಂಬರ್ 31 ಕಾಂಗ್ರೆಸ್ ಅಭ್ಯರ್ಥಿ ಗೀತಾಬಾಯಿ ಹಬೀಬ ನಿನ್ನೆ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಅದ್ಧೂರಿ ಮೆರೆವಣಿಗೆ ನಡೆಸಿದ ಬಳಿಕ ಗೀತಾಬಾಯಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸುವ ಮೆರವಣಿಗೆಯಲ್ಲಿ ಮಹಿಳೆಯರ ಸಖತ್ ಸ್ಟೆಪ್ಸ್ ಹಾಕಿದ್ದು, ಈ ವೇಳೆ ವ್ಯಕ್ತಿಯೊಬ್ಬ ಮಹಿಳೆ ಮೇಲೆ 500 ಮುಖ ಬೆಲೆಯ ನೋಟು ಎಸೆದು ವಿಕೃತಿ ಮೆರೆದಿದ್ದಾರೆ.
ಸ್ಥಳಿಯ ಸಂಸ್ಥೆ ಚುನಾವಣೆಯ ಆರಂಭದಲ್ಲೇ ಅಭ್ಯರ್ಥಿಗಳು ಹಣದ ಹೊಳೆ ಹರಿಸುತ್ತಿರುವುದು ಕಂಡುಬಂದಿದೆ.