Tuesday, May 17, 2022

ಆಕಸ್ಮಿಕ ಬೆಂಕಿ: ಹೊತ್ತಿ ಉರಿದ ಗೂಡ್ಸ್​ ವಾಹನ

Must read

ಗದಗ: ರಸ್ತೆಬದಿ ನಿಂತಿದ್ದ ಗೂಡ್ಸ್ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸವೇಶ್ವರ ನಗರದಲ್ಲಿ ನಡೆದಿದೆ.

ರಬ್ಬಾನಿಸಾಬ್ ಮೀರಚ್ಚನೆ ಎಂಬುವರಿಗೆ ಸೇರಿದ ಗೂಡ್ಸ್ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ವಾಹನ ಸುಟ್ಟು ಕರಕಲಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest article