Tuesday, May 17, 2022

ತೆನೆ ಇಳಿಸಿ ‘ಕೈ’ ಹಿಡಿಯಲು ಸಿದ್ಧರಾದ್ರಾ ಅರಸೀಕೆರೆ ಶಾಸಕ ಶಿವಲಿಂಗೇಗೌಡ..!

Must read

ಹಾಸನ: ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರು ಜೆಡಿಎಸ್​ ತೊರೆದು ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಲು ಸಿದ್ದರಾಗಿದ್ದಾರಾ ಎಂಬ ಅನುಮಾನಗಳು ಮಾಡಿವೆ.

ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಹಾಸನ ಜಿಲ್ಲೆಯ ಇಬ್ಬರು ಪ್ರಭಾವಿ ಶಾಸಕರಾದ ಶಿವಲಿಂಗೇಗೌಡ ಹಾಗೂ ಅರಕಲಗೂಡು ಶಾಸಕ ಎ.ಟಿ.ರಾಮುಸ್ವಾಮಿ ಗೈರಾಗಿದ್ದಾರೆ. ಜೊತೆಗೆ ಕಳೆದ ಮೂರ್ನಾಲ್ಕು ತಿಂಗಳಿಂದ ಜೆಡಿಎಸ್ನ ಯಾವುದೇ ಸಭೆ-ಸಮಾರಂಭಗಳಲ್ಲಿ ಈ ಇಬ್ಬರು ಶಾಸಕರು ಕಾಣಿಸಿಕೊಂಡಿಲ್ಲ. ಹೀಗಾಗಿ, ಕಾಂಗ್ರೆಸ್ ಸೇರಲು ತೆರೆಮರೆಯಲ್ಲಿ ಶಾಸಕರು ಕಸರತ್ತು ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಶಿವಲಿಂಗೇಗೌಡ ಹಾಗೂ ಎ.ಟಿ.ರಾಮುಸ್ವಾಮಿ ಇಬ್ಬರು ಸಾರ್ವಜನಿಕವಾಗಿ ಕಾಣಿಸಿಕೊಂಡರೂ ಕಾರ್ಯಕ್ರಮಕ್ಕೆ ಗೈರಾಗಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ.

ಇಬ್ಬರು ಶಾಸಕರ ನಡೆಯಿಂದ ಹಾಸನ ಜಿಲ್ಲೆಯಲ್ಲಿ ರಾಜಕೀಯ ಬಿರುಗಾಳಿ ಬದಲಾಗುತ್ತಾ? ಎಂಬ ಪ್ರಶ್ನೆಗಳು ಮೂಡಿವೆ. ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಈಗಾಗಲೇ ತಮ್ಮ ತಪ್ಪು ತಿದ್ದುಕೊಂಡು ಪಕ್ಷದಲ್ಲಿ ಇದ್ದರೆ ಇರಲಿ, ಇಲ್ಲದಿದ್ದರೆ ಅವರ ಇಷ್ಟ ಎಂದಿದ್ದಾರೆ.

Latest article