ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಮನೆಯ ಕಾಂಪೌಂಡ್ಗೆ ನುಗ್ಗಿ ನಾಯಿಯನ್ನು ಹೊತ್ತೊಯ್ದಿದಿರುವ ಘಟನೆ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ 1ಗಂಟೆ ಸುಮಾರಿಗೆ ಶ್ರವಣಬೆಳಗೊಳದ ಶ್ರೀಕಂಠನಗರ ಬಡಾವಣೆಯ ಸರೋಜಮ್ಮ ಪುಟ್ಟಸ್ವಾಮಿ ಎನ್ನುವವ ಮನೆ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಕಾಂಪೌಂಡ್ ಜಿಗಿದು ಬಂದು ಕಟ್ಟಿದ್ದ ನಾಯಿಯನ್ನು ಸಾಯಿಸಿ ಹೊತ್ತೊಯ್ದಿದೆ.
ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶೀಘ್ರವೇ ಚಿರತೆ ಸೆರೆ ಹಿಡಿಯುವ ಭರವಸೆ ನೀಡಿದ್ದಾರೆ.