Friday, January 21, 2022

ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್​ ನಾಯಕರಿಗೆ ಶಾಕ್​..!

Must read

ಹಾಸನ: ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್​​ ಪಕ್ಷದ ನಾಯಕರ ವಿರುದ್ಧ ಹಾಸನದ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಜನವರಿ 12ರಂದು ಸಾವಿರಾರು ಕಾರ್ಯಕರ್ತರು ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ಕೋವಿಡ್ ನಿಯಮ ಉಲ್ಲಂಘನೆ ಆರೋಪದಲ್ಲಿ ಕಾರ್ಯಕರ್ತರನ್ನು ಕರೆದೊಯ್ದ ನಾಯಕರ ವಿರುದ್ಧ ಹಾಸನ ನಗರ, ಬಡಾವಣೆ, ಪೆನ್ಷನ್ ಮೊಹಲ್ಲಾ, ಹೊಳೆನರಸೀಪುರ ಹಾಗೂ ಚನ್ನರಾಯಪಟ್ಟಣ ತಾಲೂಕಿನ ಠಾಣೆಗಳಲ್ಲಿ ದೂರು ದಾಖಲಾಗಿದೆ.

ಕೋವಿಡ್ ಮಾರ್ಗಸೂಚಿಗೆ ವಿರುದ್ಧವಾಗಿ ಜನರನ್ನು ಸೇರಿಸಿ, ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವ ಆರೋಪದ ಮೇಲೆ ಕಾಂಗ್ರೆಸ್​​ ನಾಯಕರ ವಿರುದ್ಧ ಕ್ರಮತೆಗೆದುಕೊಳ್ಳು ಪೊಲೀಸ್​ ಇಲಾಖೆ ಮುಂದಾಗಿದೆ.

Latest article