Thursday, January 27, 2022

ರಿಂಗ್​ ರಸ್ತೆ ವಿವಾದ: ಶಾಸಕ ಪ್ರೀತಂಗೌಡ ಬೆಂಬಲಿಗರುಮತ್ತು ರೈತರ ನಡುವೆ ಮಾರಾಮಾರಿ..!

Must read

ಹಾಸನ: ಜಿಲ್ಲೆಯಲ್ಲಿ ಶಾಸಕ ಪ್ರೀತಂಗೌಡ ಬೆಂಬಲಿಗರು ಹಾಗೂ ಗ್ರಾಮಸ್ಥರು ನಡುವೆ ಮಾರಾಮಾರಿ ನಡೆದಿದ್ದು, ಐದುಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಾಸನದ ಡೈರಿ ವೃತ್ತದಿಂದ ಬೇಲೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಕಾಮಗಾರಿ ರಿಂಗ್‌ ರಸ್ತೆಗೆ ಭೂಮಿ ನೀಡಿದ್ದು ಸೂಕ್ತ ಪರಿಹಾರ ನೀಡಿಲ್ಲ ಎಂದು ರೈತರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಇದನ್ನು ಪರಿಗಣಿಸಿ ಕಳೆದ ಆಗಸ್ಟ್ 16ರಂದು ಕೋರ್ಟ್ ಕಾಮಗಾರಿಗೆ ತಡೆ ನೀಡಿತ್ತು. ಆದರೆ ಕೋರ್ಟ್ ಆದೇಶಕ್ಕೆ ವಿರುದ್ಧವಾಗಿ ಕಾಮಗಾರಿ ಆರಂಭಗೊಂಡಿದ್ದು, ಇದನ್ನು ಪ್ರಶ್ನಿಸಿದವರಿಗೆ ಶಾಸಕ ಪ್ರೀತಂಗೌಡ ಹಾಗೂ ಬೆಂಬಲಿಗರ ಪ್ರತಿನಿತ್ಯ ಗ್ರಾಮಸ್ಥರಿಗೆ ಧಮ್ಕಿ ಹಾಕುತ್ತಿದ್ದಾರೆ ಎಂದು ರೈತರು ಗಂಭೀರ ಆರೋಪ ಮಾಡಿದ್ದಾರೆ. ನೀವು ನ್ಯಾಯಾಲಯದಲ್ಲಿ ಹಾಕಿರುವ ಕೇಸ್ ವಾಪಸ್ ಪಡೆಯಿರಿ. ಇಲ್ಲವಾದರೆ ಯಾವುದೇ ರೀತಿಯ ಪರಿಹಾರ ಕೊಡುವುದಿಲ್ಲ ಎಂದು ಆವಾಜ್​ ಹಾಕಿದ್ದಾರೆ ಎನ್ನಲಾಗಿದೆ.

ಇನ್ನು ಇದೇ ವಿಚಾರಕ್ಕೆ ನಿನ್ನೆ ತಡರಾತ್ರಿ ಶಾಸಕರ ಕೆಲ ಬೆಂಬಲಿಗರು ಉದ್ದೂರಿಗೆ ತೆರಳಿ ಸ್ಥಳೀಯರೊಂದಿಗೆ ಗಲಾಟೆ ಮಾಡಿದ್ದು, ನೀವು ಒಬ್ಬರೇ ಓಡಾಡಲ್ಲ ಎಲ್ಲರೂ ಓಡಾಡೋದು ಜಾಗ ಬಿಡಿ ಎಂದು ಅವಾಜ್ ಹಾಕಿದ್ದಾರೆ ಎನ್ನಲಾಗಿದೆ. ಮಾತು ಅತಿರೇಕ್ಕೇರಿದ್ದು, ಪ್ರೀತಂಗೌಡ ಬೆಂಬಲಿಗರು ಹಾಗೂ ಗ್ರಾಮಸ್ಥರು ನಡುವೆ ಮಾರಾಮಾರಿ ನಡೆದಿದೆ. ಘಟನೆ ಸಂಬಂಧ ಗ್ರಾಮಸ್ಥರು ಪೆನ್​ಷನ್ ಮೊಹಲ್ಲಾ ಠಾಣೆಗೆ ದೂರು ನೀಡಿದ್ದಾರೆ.

Latest article