Tuesday, October 26, 2021

ಆರೋಪಿಯನ್ನು ವಶಕ್ಕೆ ಪಡೆಯಲು ಬಂದ ಪೊಲೀಸರನ್ನೇ ತಳ್ಳಾಡಿದ ಜನರು..!

Must read

ಹಾಸನ: ಆರೋಪಿಯನ್ನು ವಶಕ್ಕೆ ಪಡೆಯಲು ಬಂದ ಪೊಲೀಸರನ್ನೇ ಜನರು ತಳ್ಳಾಡಿರುವ ಘಟನೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಚನ್ನರಾಯಪಟ್ಟಣ ತಾಲೂಕಿನ ಬನವಾಸೆ ಹಾಗೂ ಬಿ.ಕಾಳೇನಹಳ್ಳಿ ಯುವಕರ ನಡುವೆ ಗಲಾಟೆ ನಡೆದಿತ್ತು. ಘಟನೆ ಸಂಬಂಧ ದೂರು ದಾಖಲಾಗಿದ್ದು, ಗಲಾಟೆಯಲ್ಲಿ ಭಾಗಿಯಾಗಿದ್ದ ಪ್ರಕಾಶ್ ಎಂಬಾತನನ್ನು ಬಂಧಿಸಲು ಹೋದ ಪೊಲೀಸ್​ ಸಿಬ್ಬಂದಿಗೆ ಆರೋಪಿ ಹಾಗೂ ಆತನ ಸಂಬಂಧಿಕರು ಅವಾಜ್​ ಹಾಕಿದ್ದಾರೆ. ಕೂಡಲೇ ಸಿಬ್ಬಂದಿ ನಗರಠಾಣೆ ಸರ್ಕಲ್ ಇನ್ಸ್​ಪೆಕ್ಟರ್ ಸುಬ್ರಮಣ್ಯ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಇನ್ಸ್​ಪೆಕ್ಟರ್​ ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲಿದ್ದ ಕೆಲ ಜನರು ಪೊಲೀಸರನ್ನೇ ತಳ್ಳಾಡಿರುವ ವಿಡಿಯೋ ವೈರಲ್​ ಆಗಿದೆ.

ಪ್ರಕರಣ ಸಂಬಂಧ ನಗರಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

More articles

Latest article